ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಚಾಲನೆ

ಡೆಹ್ರಾಡೂನ್, ಮೇ ೨೫: ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ಮತ್ತು ರಾಷ್ಟç ರಾಜಧಾನಿ ದೆಹಲಿ ನಡುವೆ ಸಂಪರ್ಕ ಬೆಸೆಯುವ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ ಮೋದಿಯವರು, ಡೆಹ್ರಾಡೂನ್ ಮತ್ತು ದೆಹಲಿ ನಡುವೆ ಉತ್ತರಾಖಂಡ್ ತನ್ನ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸೌಲಭ್ಯ ಪಡೆಯುತ್ತಿದೆ.ಈ ಎಕ್ಸ್ಪ್ರೆಸ್ ರೈಲು ಜನರ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಅಲ್ಲದೇ, ರೈಲು ದೇಶದ ರಾಜಧಾನಿಯನ್ನು ದೇವ ಭೂಮಿ ಉತ್ತರಾಖಂಡ್‌ಅನ್ನು ವೇಗದಲ್ಲಿ ಸಂಪರ್ಕಿಸುತ್ತದೆ ಎಂದು ಹೇಳಿದರು. ನಮ್ಮ ರಾಷ್ಟçವನ್ನು ನೋಡಲು ಮತ್ತು ರಾಷ್ಟçದ ಸಾರವನ್ನು ಅರ್ಥಮಾಡಿಕೊಳ್ಳಲು ವಿಶ್ವದಾದ್ಯಂತ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಲು ಕಾಯುತ್ತಿದ್ದಾರೆ. ಇಂತಹ ಸಮಯದಲ್ಲಿ ಉತ್ತರಾಖಂಡದAತಹ ರಾಜ್ಯಗಳಿಗೆ ಅತ್ಯುತ್ತಮ ಅವಕಾಶಗಳಿವೆ. ವಂದೇ ಭಾರತ್ ರೈಲು ಕೂಡ ಈ ಅವಕಾಶದ ಸಂಪೂರ್ಣ ಪ್ರಯೋಜನವನ್ನು ಪಡೆಯಲು ಉತ್ತರಾಖಂಡಕ್ಕೆ ಸಹಾಯ ಮಾಡಲಿದೆ ಎಂದು ತಿಳಿಸಿದರು.

‘ಗ್ಯಾರೆಂಟಿ’ ಈಡೇರದಿದ್ದಲ್ಲಿ ಹೋರಾಟ-ಪ್ರತಾಪ್ ಸಿಂಹ

ಮೈಸೂರು, ಮೇ ೨೫: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿರುವುದು ಮೊದಲು ನಿಲ್ಲಿಸಿ. ಸಿಎಂ ಹುದ್ದೆ ಶಾಶ್ವತವಲ್ಲ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಮತದಾರರು ಕಾಂಗ್ರೆಸ್ ಮುಖ ನೋಡಿ ಮತ ಹಾಕಿಲ್ಲ. ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಇನ್ನು ಗ್ಯಾರಂಟಿಗಳನ್ನು ಸಮನಾಗಿ ನೀಡಿ. ಒಂದು ವೇಳೆ ಷರತ್ತು ಹಾಕಿದರೆ ಜೂನ್ ೧ರ ನಂತರ ಹೋರಾಟ ಮಾಡುತ್ತೇವೆ ಎಂದರು. ಬಿಜೆಪಿ ೪೦ ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ತನಿಖೆಗೆ ಆದೇಶಿ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರು, ಮೇ ೨೫: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಮೃತನನ್ನು ರವಿ ಅಲಿಯಾಸ್ ಮತ್ತಿರವಿ (೪೨) ಎಂದು ಗುರುತಿಸಲಾಗಿದ್ದು ಇವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೊಟೇಲ್ ಬಳಿ ಕೊಲೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ (೪೨) ಎಂಬವರನ್ನು ಬೈಕ್‌ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸಿಎಂಹೆಚ್ ಬಾರ್ ಬಳಿಯಿಂದ ರವಿಯನ್ನ ಅಟ್ಟಾಡಿಸಿದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ನಂತರ ಅವರು ಹಳ್ಳಿರುಚಿ ಹೊಟೇಲ್ ಬಳಿ ಮಾರಕಾಸ್ತçಗಳಿಂದ ಕೊಚ್ಚಿದ್ದು ಕೊನೆಗೆ ತಲೆಯ ಮೇಲೆ ಸೈಜ್ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ತಾ. ೨೪ ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬಕ್ಕೆ ಹಾಜರಾಗಲು ರವಿ ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ತಪ್ಪಿಸಿಕೊಳ್ಳುವ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಬಲೆ ಬೀಸಲಾಗಿದೆ.

ಕಾರಾಗೃಹದ ಸ್ನಾನಗೃಹದಲ್ಲಿ ಬಿದ್ದ ಮಾಜಿ ಸಚಿವ

ನವದೆಹಲಿ, ಮೇ ೨೫: ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಒಂದು ವಾರದಲ್ಲಿ ಜೈನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದು ಇದು ಎರಡನೇ ಬಾರಿ. ಕೆಲವೇ ದಿನಗಳ ಹಿಂದೆ ಬೆನ್ನುಮೂಳೆಯ ಸಮಸ್ಯೆಯ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ೨೦೨೨ ರ ಮೇ ೩೧ ರಂದು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಜೈನ್ ಅವರನ್ನು ಬಂಧಿಸಿತ್ತು.

‘ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಸ್ಥಗಿತಕ್ಕೆ ಅಮುಲ್‌ಗೆ ನಿರ್ದೇಶಿಸಿ’

ನವದೆಹಲಿ, ಮೇ ೨೫: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಜರಾತ್ ಮೂಲದ ಡೈರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ತಮಿಳುನಾಡು ಹಾಲಿನ ಶೆಡ್ ಪ್ರದೇಶದಲ್ಲಿ ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಅಮುಲ್) ಹಾಲು ಸಂಗ್ರಹಿಸುವುದರಿAದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದರು. ಇತ್ತೀಚೆಗಷ್ಟೇ ಕೃಷ್ಣಗಿರಿ ಜಿಲ್ಲೆಯಲ್ಲಿ ಅಮುಲ್ ಚಿಲ್ಲಿಂಗ್ ಸೆಂಟರ್ ಮತ್ತು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಬಳಸಿಕೊಂಡಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸ್ಟಾಲಿನ್ ಹೇಳಿದರು. ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಎಫ್‌ಪಿಒಗಳು ಮತ್ತು ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ.

ಸಂಸತ್ ಭವನ ರಾಷ್ಟçಪತಿಯೇ ಉದ್ಘಾಟಿಸಬೇಕೆಂದು ಪಿಐಎಲ್

ನವದೆಹಲಿ, ಮೇ ೨೫: ನೂತನ ಸಂಸತ್ ಕಟ್ಟಡವನ್ನು ತಾ. ೨೮ ರಂದು ರಾಷ್ಟçಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟçಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್‌ನಲ್ಲಿ ಹೇಳಲಾಗಿದೆ. ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ತಾ. ೧೮ ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟçಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ರಾಷ್ಟçಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.

ರಜೆ ನಗದೀಕರಣ ಮೇಲಿನ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ

ನವದೆಹಲಿ, ಮೇ ೨೫: ಕೇಂದ್ರ ಸರ್ಕಾರ ೨೦೨೩-೨೪ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಕ್ಕೆ ಅನುಗುಣವಾಗಿ, ಹಣಕಾಸು ಸಚಿವಾಲಯ ಗುರುವಾರ ಖಾಸಗಿ ವಲಯದ ಸಂಬಳದ ಉದ್ಯೋಗಿಗಳಿಗೆ ನಿವೃತ್ತಿಯ ನಂತರ ಪಡೆಯುವ ರಜೆ ಎನ್‌ಕ್ಯಾಶ್‌ಮೆಂಟ್‌ಗೆ ನೀಡಲಾಗಿದ್ದ ತೆರಿಗೆ ವಿನಾಯಿತಿ ಮಿತಿಯನ್ನು ೨೫ ಲಕ್ಷ ರೂ.ಗೆ ಹೆಚ್ಚಿಸಿದೆ. ಇಲ್ಲಿಯವರೆಗೆ, ಸರ್ಕಾರೇತರ ಉದ್ಯೋಗಿಗಳಿಗೆ ರಜೆ ಎನ್‌ಕ್ಯಾಶ್‌ಮೆಂಟ್ ಮೇಲಿನ ತೆರಿಗೆ ವಿನಾಯಿತಿ ಮಿತಿ ೩ ಲಕ್ಷ ರೂ. ಇತ್ತು. ಇದೀಗ ಅದನ್ನು ೨೫ ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಆದಾಯ ತೆರಿಗೆಯಿಂದ ವಿನಾಯಿತಿ ಪಡೆದ ಒಟ್ಟು ಮೊತ್ತವು ೨೫ ಲಕ್ಷ ರೂಪಾಯಿ ಮೀರಬಾರದು ಎಂದು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.