ಮಡಿಕೇರಿ, ಮೇ ೨೬: ಕೊಡಗು ಪತ್ರಕರ್ತರ ಸಂಘ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಘದಿAದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷಿö್ಮ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವರದಿಗಳು ೨೦೨೨ ರ ಜನವರಿಯಿಂದ ೨೦೨೨ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದೃಢೀಕರಣವಿರಬೇಕು.

ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕಾಗಿದೆ. ದೃಶ್ಯ ಮಾಧ್ಯಮದವರು ಕೂಡ ಒಂದು ಪ್ರಶಸ್ತಿಗೆ ಒಂದು ವರದಿಯನ್ನು ಮಾತ್ರ ಕಳುಹಿಸಬಹುದಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ವರದಿಯ ಮೂರು ಜೆರಾಕ್ಸ್ ಪ್ರತಿಗಳು ಮತ್ತು ಮಾಧ್ಯಮದವರು ಪೆನ್‌ಡ್ರೆöÊವ್ ಅಥವಾ ಡಿವಿಡಿಯನ್ನು ಜೂನ್ ೧೦ ರೊಳಗಾಗಿ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿ ಕೊಡಗು ಪತ್ರಕರ್ತರ ಸಂಘ ಅ/o ಕೊಡಗು ಚಾನಲ್ ಕಚೇರಿ, ಕೋಟೆ ಮಾರಿಯಮ್ಮ ದೇವಾಲಯ ಸಮೀಪ ಪೆನ್ಷನ್‌ಲೇನ್ ಮಡಿಕೇರಿ ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ೯೯೪೫೪೧೧೮೨೧ ಸಂಪರ್ಕಿಸಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.