ಕೂಡಿಗೆ, ಮೇ ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಾಲಯ ಸೇವಾ ಸಮಿತಿಯ ವತಿಯಿಂದ ಮಾರಿಯಮ್ಮ ದೇವಿಯ ವಾರ್ಷಿಕ ಮಹಾಪೂಜೆಯು ಶ್ರಧ್ದಾಭಕ್ತಿಯಿಂದ, ವಿಶೇಷ ಹೋಮ ಹವನಗಳ ನಡುವೆ ನಡೆಯಿತು.

ವಿವಿಧ ವಿಶೇಷ ಪೂಜಾ ಕೈಂಕರ್ಯಗಳ ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು.

ಪೂಜಾ ಕೈಂಕರ್ಯಗಳನ್ನು ಅರ್ಚಕ ಚಂದ್ರುಮುರುಳಿ ಆರಾಧ್ಯ ಅವರ ತಂಡದವರು ನೆರವೇರಿಸಿದರು. ಅಗಮಿಸಿದ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯ ಸೇವಾ ಸಮಿತಿಯ ಅಧ್ಯಕ್ಷ ಉದಯ, ಕಾರ್ಯದರ್ಶಿ ಯೊಗೇಶ್, ಉಪಾಧ್ಯಕ್ಷ ವಿಜಯಕುಮಾರ್, ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಬ್ಯಾಡಗೊಟ್ಟ ಮಲ್ಲೇನಹಳ್ಳಿ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.