ಮಡಿಕೇರಿ, ಮೇ ೨೬ : ಪೊಲೀಸರಿಂದ ಬಂಧಿಸಲ್ಪಟ್ಟ ಬಳಿಕ ಪರಾರಿಯಾಗಿದ್ದ ಗಾಂಜಾ ಮಾರಾಟ ಪ್ರಕರಣದ ಆರೋಪಿಯನ್ನು ಸೆನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಚರಣ್ ಎಂಬಾತ ತಾ. ೧೯ ರಂದು ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ಬಂಧಿಸಿ ಆತನಿಂದ ೧ ಕೆಜಿ ೧೦೫ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವ ಸಂದರ್ಭ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಪತ್ತೆಗೆ ಕಾರ್ಯಾಚರಣೆ ಕೈಗೊಂಡ ಪೊಲೀಸರು ತಾ. ೨೩ ರಂದು ಆರೋಪಿಯನ್ನು ಉಡುಪಿಯಲ್ಲಿ ಬಂಧಿಸಿ ಮಡಿಕೇರಿಗೆ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.