ನಾಪೋಕ್ಲು, ಮೇ ೨೭: ಸ್ಥಳೀಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ೨೩ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇಲ್ಲಿಯ ಕೆ.ಪಿ.ಎಸ್ ಶಾಲಾ ಮೈದಾನದಲ್ಲಿ ಜರುಗಿತು. ಅತಿಥಿ ಕೆ.ಪಿ.ಎಸ್. ಪ್ರಾಂಶುಪಾಲರಾದ ಡಾ. ಅವನಿಜ ಸೋಮಯ್ಯ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಹಿತವಚನವನ್ನು ನುಡಿದರು.

ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಕುಂಡಿಯೋಳAಡ ಗಣೇಶ್ ಮುತ್ತಪ್ಪ ಮಾತನಾಡಿ, ಮಕ್ಕಳು ಜೀವನದಲ್ಲಿ ಸದ್ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಯಾಗಿ ಬಾಳಬೇಕೆಂದು ಕಿವಿ ಮಾತನ್ನು ಹೇಳಿದರು. ಮತ್ತೋರ್ವ ಅತಿಥಿ ಸ್ಥಳಿಯ ಮಹಿಳಾ ಸಮಾಜದ ಅಧ್ಯಕ್ಷ ಕುಂಚೇಟ್ಟಿರ ರೇಷ್ಮಾ ಉತ್ತಪ್ಪ ಮಾತನಾಡಿ, ಇಂತಹ ಶಿಬಿರಗಳಿಂದ ಮಕ್ಕಳಿಗೆ ಉತ್ತಮವಾದ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ಇದರ ಸದುಪಯೋಗ ಪಡೆದುಕೊಂಡು ಅಕಾಡೆಮಿಗೆ ಹಾಗೂ ರಾಷ್ಟçಕ್ಕೆ ಉತ್ತಮ ಕೀರ್ತಿ ತರುವಂತೆ ಕರೆ ನೀಡಿದರು.

ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಈ ವರ್ಷದ ಬೇಸಿಗೆ ಶಿಬಿರದ ತರಬೇತಿಯಲ್ಲಿ ೮೦ ಮಕ್ಕಳು ಭಾಗವಹಿಸಿದ್ದು ಸುಮಾರು ಒಂದು ತಿಂಗಳಿನ ಕಾಲ ಹಾಕಿ ಸೇರಿದಂತೆ ವಿವಿಧ ಕ್ರೀಡಾ ತರಬೇತಿಯನ್ನು ನೀಡಲಾಗಿದೆ. ಇದರಿಂದಾಗಿ ಮಕ್ಕಳು ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ, ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ಕುಂಚೇಟ್ಟಿರ ರೇಷ್ಮಾ ಉತ್ತಪ್ಪ ಮಾತನಾಡಿ, ಇಂತಹ ಶಿಬಿರಗಳಿಂದ ಮಕ್ಕಳಿಗೆ ಉತ್ತಮವಾದ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ಇದರ ಸದುಪಯೋಗ ಪಡೆದುಕೊಂಡು ಅಕಾಡೆಮಿಗೆ ಹಾಗೂ ರಾಷ್ಟçಕ್ಕೆ ಉತ್ತಮ ಕೀರ್ತಿ ತರುವಂತೆ ಕರೆ ನೀಡಿದರು.

ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಈ ವರ್ಷದ ಬೇಸಿಗೆ ಶಿಬಿರದ ತರಬೇತಿಯಲ್ಲಿ ೮೦ ಮಕ್ಕಳು ಭಾಗವಹಿಸಿದ್ದು ಸುಮಾರು ಒಂದು ತಿಂಗಳಿನ ಕಾಲ ಹಾಕಿ ಸೇರಿದಂತೆ ವಿವಿಧ ಕ್ರೀಡಾ ತರಬೇತಿಯನ್ನು ನೀಡಲಾಗಿದೆ. ಇದರಿಂದಾಗಿ ಮಕ್ಕಳು ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ, ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಭಕ್ತ ಜನಸಂಘದ ಅಧ್ಯಕ್ಷ ಕಾಂಡAಡ ಜೋಯಪ್ಪ, ಲಯನ್ಸ್ ವಲಯಾಧ್ಯಕ್ಷ ಮುಕ್ಕಾಟಿರ ವಿನಯ್, ಬಿದ್ದಾಟಂಡ ಮಮತಾ ಚಿಣ್ಣಪ್ಪ, ಎಳ್ತಂಡ ಸಾಬಾ ಬೋಪಣ್ಣ, ಬಿದ್ದಾಟಂಡ ಜಿನ್ನು ನಾಣಯ್ಯ, ಕೊಂಡಿರ ನಾಣಯ್ಯ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಮಾತನಾಡಿದರು. ವೇದಿಕೆಯಲ್ಲಿ ಖಜಾಂಚಿ ಕುಶು ಮಾಚೇಟಿರ, ಕುಶಾಲಪ್ಪ ತರಬೇತುದಾರರಾದ ಕೇಟೋಳಿರ ಡಾಲಿ ಅಪ್ಪಚ್ಚ, ಅರೆಯಡ ಗಣೇಶ್ ಬೆಳ್ಳಿಯಪ್ಪ, ಚೆಟ್ಟಿಯಾರಂಡ ದಿಲನ್, ಧೀರಜ್, ಎಲ್ಲಾ ನಿರ್ದೇಶಕರು, ಪೋಷಕರು ಉಪಸ್ಥಿತರಿದ್ದರು. ಈ ಸಂದರ್ಭ ಶಿಬಿರಾರ್ಥಿಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳ ಪ್ರದರ್ಶನ ಮತ್ತು ಅತಿಥಿಗಳಿಗೆ ಗೌರವ ರಕ್ಷೆ ಸಮರ್ಪಿಸಲಾಯಿತು. ಆ ಬಳಿಕ ಶಿಬಿರಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿ ಗೌರವಿಸಿದರು.