ಕೂಡಿಗೆ, ಮೇ ೨೭ : ಕರ್ನಾಟಕ ಸರ್ಕಾರದ ಇ-ಆಡಳಿತ ಕೇಂದ್ರದಿAದ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ ಕೊಡವ ವಿಶ್ವವಿದ್ಯಾಲಯದ ನೂತನ ವೆಬ್‌ಸೈಟ್ (ಞuಞ.ಞಚಿಡಿಟಿಚಿಣಚಿಞಚಿ.gov.iಟಿ) ಅನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಆಗಿರುವ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭ ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ವಿಶ್ವವಿದ್ಯಾಲಯದ ಪರವಾಗಿ ರಾಜ್ಯಪಾಲರನ್ನು ಹೂಗುಚ್ಛ ನೀಡಿ ಗೌರವಿಸಿದರು. ವಿಶ್ವವಿದ್ಯಾಲಯದ ವೆಬ್‌ಸೈಟ್ ಅನಾವರಣಗೊಳಿಸಿದ ರಾಜ್ಯಪಾಲರು ವಿಶ್ವವಿದ್ಯಾಲಯದ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಶ್ರೇಯೋಭಿವೃದ್ಧಿಗೆ ಶುಭಕೋರಿದರು. ಇದೇ ಸಂದರ್ಭದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು, ಆಪ್ತಕಾರ್ಯದರ್ಶಿಗಳು, ಎಡಿಸಿ, ವಿಶೇಷ ಅಧಿಕಾರಿಗಳು, ಇ-ಆಡಳಿತ ಕೇಂದ್ರದ ಪ್ರತಿನಿಧಿಗಳು ಹಾಗೂ ರಾಜಭವನದ ವಿಶ್ವವಿದ್ಯಾಲಯ ವಿಭಾಗದ ಅಧಿಕಾರಿಗಳು ಹಾಜರಿದ್ದರು. ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಅಂತರ್‌ಜಾಲದ ಮುಖಾಂತರ ಭಾಗಿಯಾದರು. ಕೊಡಗು ವಿಶ್ವವಿದ್ಯಾಲಯದ ಪ್ರವೇಶಾತಿ ಸಂಬAಧ ಎಲ್ಲಾ ಮಾಹಿತಿಗಳನ್ನು ವೆಬ್‌ಸೈಟ್ (ಞuಞ.ಞಚಿಡಿಟಿಚಿಣಚಿಞಚಿ.gov.iಟಿ) ಮೂಲಕ ಪಡೆಯಬಹುದಾಗಿದೆ.