ಮಡಿಕೇರಿ, ಮೇ ೨೮: ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯಲ್ಲಿ "ಆರೋಗ್ಯ ಅಮೃತ ಅಭಿಯಾನದಡಿ" ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸೌಮ್ಯ ಬಾಲು ಚಾಲನೆ ನೀಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಂಡಿದ್ದು, ಇಂದಿನ ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ, ರಕ್ತ ಪರೀಕ್ಷೆ ಕೈಗೊಂಡು ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬAಧಿಸಿದAತೆ ಆರೋಗ್ಯ ಶಿಬಿರದಲ್ಲಿ ತಪಾಸಣೆ ಕೈಗೊಳ್ಳಲಾಯಿತು. ಈ ಸಂದರ್ಭ ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲೂಕು ಐಇಸಿ ಸಂಯೋಜಕ ನರೇಂದ್ರ, ತಾಲೂಕು ಆರೋಗ್ಯ ಸಂಯೋಜಕರಾದ ಅನಿತಾ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.