ಮಡಿಕೇರಿ, ಮೇ ೨೭: ಗಾಂಜಾ ಮಾರಾಟ ಮಾಡುತ್ತಿದ್ದ ಈರ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಂ.ಬಾಡಗ ಗ್ರಾಮದ ಎಂ.ಬಿ. ಹತೀಕ್ (೩೪), ಬಿ.ಎಂ. ರಶೀದ್ (೨೩) ಬಂಧಿತ ಆರೋಪಿಗಳು. ೬೮೩ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಗರದ ಸ್ಟ್ಟುವರ್ಟ್ ಹಿಲ್ ಬಳಿ ಗಾಂಜಾ ಮಾರಾಟದ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕ ವಸ್ತು ತಡೆಗಟ್ಟುವ ನಿಟ್ಟಿನಲ್ಲಿ ಮಡಿಕೇರಿ ಡಿವೈಎಸ್‌ಪಿ ಎಂ. ಜಗದೀಶ್, ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಉಪನಿರೀಕ್ಷಕ ಶ್ರೀನಿವಾಸ್ ಸೇರಿದಂತೆ ಡಿಸಿಆರ್‌ಬಿ ಸಿಬ್ಬಂದಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದು, ಮಾದಕ ವ್ಯಸನ ತಡೆಗಟ್ಟುವ ನಿಟ್ಟಿನಲ್ಲಿ ಮಾರಾಟ ಮಾಡುವುದು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೆಎಸ್‌ಪಿ ತಂತ್ರಾAಶದ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.