ಮಡಿಕೇರಿ, ಮೇ ೨೭: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ ೨೯ ರಂದು ಬೆಳಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಹಿಮತ್ಸಂಗ ಲೈನ್ಸ್, ಹಾಸನ, ಹ್ಯೂಂಡಾಯಿ ಕಾರ್ ಶೋರೂಮ್, ಮಡಿಕೇರಿ, ಕಲ್ಯಾಣಿ ಮೋಟರ‍್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.೮೨೯೬೦೨೦೮೨೬ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.