ಗುಡ್ಡೆಹೊಸೂರು, ಮೇ ೨೭: ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಶ್ರೀ ಜೋಡಿ ಬಸವೇಶ್ವರ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಾವಿರಾರು ಮಂದಿ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.
ಕಾವೇರಿ ನದಿಯಿಂದ ಕಲಶಪೂಜೆ ನಡೆಸಿ ಬಸವೇಶ್ವರ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ ಸಾಗಿ ಕೆಂಡಕೊAಡ ಪೂಜೆ ನೆರವೇರಿಸಿ ಕೊಂಡಹಾಯ್ದು ನಂತರ ದೇವಸ್ಥಾನದಲ್ಲಿ ಮಹಾಪೂಜೆ ನಡೆಸಲಾಯಿತು.
ಪ್ರತಿವರ್ಷದಂತೆ ಈ ವರ್ಷವೂ ಪೂಜೆ ನಡೆಯುವ ವೇಳೆ ಮಳೆ ದರ್ಶನ ನೀಡಿತು. ಈ ಸಂದರ್ಭ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಇದ್ದರು.