ಸುಂಟಿಕೊಪ್ಪ, ಮೇ ೨೭: ಹರದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರ‍್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ೧೯ ರಿಂದ ೨೭ ರವರೆಗೆ ಆಯೋಜಿಸಲಾಗಿರುವ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಗ್ರಾ.ಪಂ. ಅಧ್ಯಕ್ಷ ಬಿ.ಡಿ. ಪದ್ಮನಾಭ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಬಿ. ಪೂರ್ಣಿಮ ಚಾಲನೆ ನೀಡಿದರು.
೧೯ ರಿಂದ ೨೭ ರವರೆಗೆ ಆಯೋಜಿಸಲಾಗಿರುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ವೈಯಕ್ತಿಕ ಪ್ರತಿಭೆ ಬೆಳೆಸಿ ಪ್ರೋತ್ಸಾಹಿಸುವ ಹಾಗೂ ಅವರ ಜ್ಞಾನ ಆರೋಗ್ಯದ ಬಗ್ಗೆ ಅರಿವು ನೀಡುವ ದಿಸೆಯಲ್ಲಿ ಬೇಸಿಗೆ ಶಿಬಿರವನ್ನು ಗ್ರಾಮೀಣ ಮಟ್ಟದಲ್ಲಿ ಆಯೋಜಿಸಲಾಗಿದೆ. ಇದರ ಪ್ರಯೋಜನವನ್ನು ಈ ಭಾಗದ ಮಕ್ಕಳು ಪಡೆದುಕೊಳ್ಳುವಂತೆ ಗ್ರಾ.ಪಂ.ಅಧ್ಯಕ್ಷ ಬಿ.ಡಿ. ಪದ್ಮನಾಭ ಹೇಳಿದರು.
ಈ ಸಂದರ್ಭ ಗ್ರಂಥಾಲಯ ಮೇಲ್ವಿಚಾರಕಿ ಸಂದ್ಯಾ, ಗ್ರಾ.ಪಂ. ಸಿಬ್ಬಂದಿಗಳು, ಮಕ್ಕಳು ಇದ್ದರು.