ನಾಪೋಕ್ಲು, ಮೇ ೨೮: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ಶಾಸಕ ಎ.ಎಸ್. ಪೊನ್ನಣ್ಣ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ತಕ್ಕರಾದ ಪರದಂಡ ಲಾಲಾ ನರೇಂದ್ರ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ಪ್ರಮುಖರಾದ ಬಾಚಮಂಡ ಲವ ಚಿಣ್ಣಪ್ಪ, ಬಡಕಡ ದೀನಾ ಪೂವಯ್ಯ, ಕಲಿಯಂಡ ಸಂಪನ್ ಅಯ್ಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.