ಕುಶಾಲನಗರ, ಮೇ ೨೮: ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ ಕಚೇರಿ ಆಶ್ರಯದಲ್ಲಿ ನಶಾ ಮುಕ್ತ ಕೊಡಗು ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸರಕಾರಿ ಆಸ್ಪತ್ರೆ ಬಳಿಯಿಂದ ಹೊರಟ ಕಾಲೇಜು ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಅವರು ಚಾಲನೆ ನೀಡಿದರು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ತೆರಳಿದ ವಿದ್ಯಾರ್ಥಿಗಳು ಕರಪತ್ರ ಹಂಚುವುದು ಮತ್ತು ಬೀದಿ ನಾಟಕ ಮೂಲಕ ಜನರಿಗೆ ತಂಬಾಕು ಬೀಡಿ ಸಿಗರೇಟು ಗಾಂಜಾ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭ ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ಡಿವೈಎಸ್‌ಪಿ ಗಂಗಾಧರಪ್ಪ, ನೋಡಲ್ ಅಧಿಕಾರಿ ಡಾ. ರೇವಣ್ಣ, ಕಾಲೇಜು ಪ್ರಾಂಶುಪಾಲರಾದ ಪಂಡರಿನಾಥ ನಾಯ್ಡು, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಆರೋಗ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.