ಸೋಮವಾರಪೇಟೆ, ಮೇ ೨೮: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ಬಹುವರ್ಷಗಳ ಕನಸಾಗಿದ್ದ ಸ್ವಂತ ಕಟ್ಟಡದ ಕನಸು ಕೊನೆಗೂ ನನಸಾಗಿದ್ದು, ರೂ. ೨೩ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಅವರು ಉದ್ಘಾಟಿಸಿದರು.

ಕಳೆದ ಒಂದೂವರೆ ದಶಕಗಳ ಹಿಂದೆ ಪಟ್ಟಣ ಪಂಚಾಯಿತಿಯ ಮಾರುಕಟ್ಟೆ ಆವರಣದಲ್ಲಿ ಪಂಚಾಯಿತಿ ನೀಡಿದ ಜಾಗದಲ್ಲಿ ೧೫ ಲಕ್ಷ ರೂ.ಗಳನ್ನು ವೆಚ್ಚ ಮಾಡಿ ನಿರ್ಮಿಸಿಕೊಂಡಿದ್ದ ಕಟ್ಟಡವನ್ನು ನಂತರದ ದಿನಗಳಲ್ಲಿ ಪಂಚಾಯಿತಿ ವತಿಯಿಂದಲೇ ನೆಲಸಮ ಮಾಡಿದ್ದು, ಅಂದಿನಿAದ ಇಂದಿನವರೆಗೂ ಸ್ವಂತ ಕಟ್ಟಡ ಹೊಂದಬೇಕೆAಬ ಕನಸನ್ನು ಪದಾಧಿಕಾರಿಗಳು ಹೊಂದಿದ್ದರು.

ನAತರ ದಾನಿಗಳ ಸಹಕಾರದಿಂದ ಹಣವನ್ನು ಸಂಗ್ರಹಿಸಿ, ಇಲ್ಲಿನ ಕ್ಲಬ್‌ರಸ್ತೆಯಲ್ಲಿ ಸುಮಾರು ೨೬ ಲಕ್ಷ ವೆಚ್ಚದಲ್ಲಿ ನಿವೇಶನ ಖರೀದಿಸಿದ ಪದಾಧಿಕಾರಿ ಗಳು, ರೂ. ೨೩ ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದು, ಬಹು ವರ್ಷದ ಕನಸ್ಸೊಂದು ನನಸಾದಂತಾಗಿದೆ.

ಇಲ್ಲಿನ ಪಟ್ಟಣ ಪಂಚಾಯಿತಿಯ ಎದುರು ನಿರ್ಮಿಸಿರುವ ಕಟ್ಟಡದಲ್ಲಿ ಗಣಪತಿ ಹೋಮದೊಂದಿಗೆ ಪೂಜೆಗಳು ನಡೆದಿದ್ದು, ನಂತರ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಿರುದ್ಯೋಗದ ಬಗ್ಗೆ ಯೋಚನೆ ಮಾಡದೆ, ಸ್ವಯಂ ಉದ್ಯೋಗ ಕಂಡುಕೊAಡು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ವಾಹನ ಚಾಲಕರನ್ನು ನಾವೆಲ್ಲರೂ ಅಭಿನಂದಿಸಬೇಕಾಗಿದೆ.

ಸರ್ಕಾರ ದಿಂದ ಸಿಗುವಂತಹ ಸೌಲಭ್ಯಗಳು ವಾಹನ ಚಾಲಕರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳು ಗಮನಹರಿಸ ಬೇಕು. ನೂತನ ಕಟ್ಟಡದ ಮುಂದುವರೆದ ಕಾಮಗಾರಿಗೆ ತಮ್ಮ ಅನುದಾನದಲ್ಲಿ ೫ ಲಕ್ಷ ರೂ.ಗಳನ್ನು ಕಲ್ಪಿಸಲಾಗುವುದು ಎಂದರು.

ಮುಖ್ಯ ಅತಿಥಿಯಾಗಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಮಾತನಾಡಿ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದವರು ಕಳೆದ ೩೦ ವರ್ಷಗಳಿಂದ ಪಟ್ಟಣದಲ್ಲಿ ಅದ್ಧೂರಿ ಆಯುಧ ಪೂಜಾ ಕಾರ್ಯಕ್ರಮವನ್ನು ನಡೆಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಪ್ರತಿವರ್ಷ ಮನೋರಂಜನಾ ಕಾರ್ಯಕ್ರಮವನ್ನು ಏರ್ಪಡಿಸಿ ಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಸAಘದ ಅಧ್ಯಕ್ಷ ಕೆ.ಜಿ. ಸುರೇಶ್ ಮಾತನಾಡಿ, ನಿವೇಶನಕ್ಕೆ ೨೬ ಲಕ್ಷ ರೂ.ಗಳು ಹಾಗೂ ಕಟ್ಟಡ ಕಾಮಗಾರಿಗೆ ೨೩ ಲಕ್ಷ ರೂ.ಗಳನ್ನು ವಿನಿಯೋಗಿಸಲಾಗಿದೆ.

ಜನಪ್ರತಿನಿಧಿಗಳ ಅನುದಾನ ಹಾಗೂ ದಾನಿಗಳ ಸಹಕಾರದಿಂದ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಪಟ್ಟಣ ಪಂಚಾಯಿತಿ ಸದಸ್ಯ ಬಿ.ಆರ್. ಮಹೇಶ್, ಜೇಸಿ ಸಂಸ್ಥೆ ಅಧ್ಯಕ್ಷೆ ಎಂ.ಎ. ರುಬಿನಾ, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪತ್ರಿಕಾ ಭವನ ಅಧ್ಯಕ್ಷ ಎಸ್. ಮಹೇಶ್ ಉಪಸ್ಥಿತರಿದ್ದರು. ಪದಾಧಿಕಾರಿ ವಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.