ಮಡಿಕೇರಿ, ಮೇ ೨೯: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಸಂಸದರಾದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾ. ೩೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ತಿಳಿಸಿದ್ದಾರೆ.