ಕೂಡಿಗೆ, ಮೇ ೨೯: ಕುಶಾಲನಗರ ಶ್ರೀ ಚೌಡೇಶ್ವರಿ ದೇವಸ್ಥಾನ ದೇವಾಂಗ ಸಂಘದ ವತಿಯಿಂದ ವಾರ್ಷಿಕ ಚೌಡೇಶ್ವರಿ ಜಯಂತಿ ಜೂನ್ ೨ ರಂದು ಕುಶಾಲನಗರದ ರಥಬೀದಿಯ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ೫ ಗಂಟೆಗೆ ಗಣಪತಿ ಹೋಮ, ಧ್ವಜಾರೋಹಣ, ೭ ಗಂಟೆಗೆ ಕಾವೇರಿ ನದಿಯಲ್ಲಿ ಗಂಗೆಪೂಜೆ, ಕಳಸ ಪೂಜೆ ನಂತರ ಕಳಸ ಹೊತ್ತು ಮುಖ್ಯ ಬೀದಿಗಳಲ್ಲಿ ಜಾನಪದ ವೀರಗಾಸೆ ನೃತ್ಯ ಮತ್ತು ಮಂಗಳ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ದೇವಸ್ಥಾನ ತಲುಪುವುದು, ಚೌಡೇಶ್ವರಿ ಅಮ್ಮನವರಿಗೆ ದೇವಾಲಯದ ಆವರಣದಲ್ಲಿ ವಿಶೇಷ ಪೂಜಾವಿಧಿಗಳ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ. ರಾಜೇಶ್ ತಿಳಿಸಿದ್ದಾರೆ.

ಸಂಜೆ ೬ ಗಂಟೆಗೆ ವಿದ್ಯುತ್ ದೀಪ ಅಲಂಕೃತ ಭವ್ಯ ಮಂಟಪ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ನಗರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.