ಮಡಿಕೇರಿ ಮೇ ೨೯: ಬೇಸಿಗೆ ರಜೆ ಮುಕ್ತಾಯಗೊಂಡು ಇದೀಗ ಶಾಲೆಗಳು ಆರಂಭಗೊAಡಿದ್ದು, ಮೊದಲ ದಿನ ಉತ್ಸಾಹದಿಂದ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡಿದರು.
ಮೊದಲ ದಿನ ಆಗಿರುವ ಕಾರಣಕ್ಕೆ ದಾಖಲಾತಿ ಪ್ರಕ್ರಿಯೆಗಳು, ಶುಚಿತ್ವ ಕೆಲಸಗಳು ಶಾಲೆಯಲ್ಲಿ ನಡೆದವು. ವಿದ್ಯಾರ್ಥಿಗಳನ್ನು ಶಿಕ್ಷಕರು ಆತ್ಮೀಯವಾಗಿ ಬರಮಾಡಿಕೊಂಡರು. ಪೋಷಕರು ತಮ್ಮ ಮಕ್ಕಳನ್ನು ಕರೆತಂದು ಶಾಲೆಗಳಿಗೆ ಬಿಡುತ್ತಿದ್ದ ದೃಶ್ಯಗಳು ಕಂಡುಬAದವು.
ಶಾಲೆಯನ್ನು ತಳಿರು ತೋರಣ ಗಳಿಂದ ಅಲಂಕರಿಸಿ ಶಾಲಾ ವಾತಾವರಣವನ್ನು ಆಕರ್ಷಣೀಯ ಗೊಳಿಸಲಾಗಿತ್ತು. ಅಕ್ಷರ ದಾಸೋಹ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಸಿಹಿ ಊಟ ಉಣ ಬಡಿಸಲಾಯಿತು. ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಶುಚಿತ್ವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಶಾಲೆಗೆ ಬಂದ ಖುಷಿಯಲ್ಲಿ ವಿದ್ಯಾರ್ಥಿಗಳು ತಮ್ಮ ಸ್ನೇಹಿತರನ್ನು ಭೇಟಿಯಾಗಿ ಸಂಭ್ರಮಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಒಟ್ಟು ೫೦೧ ಪ್ರಾಥಮಿಕ ಶಾಲೆಗಳು ಮತ್ತು ೧೭೦ ಪ್ರೌಢ ಶಾಲೆಗಳು ಸೇರಿ ಒಟ್ಟು ೬೭೧ ಶಾಲೆಗಳು ಆರಂಭಗೊAಡಿದ್ದು, ತಾ. ೩೧ ರಿಂದ ಪಾಠ, ಪ್ರವಚನ ಆರಂಭಗೊಳ್ಳಲಿದೆ.
ಎತ್ತಿನ ಗಾಡಿಯಲ್ಲಿ ಶಾಲೆಗೆ ಬಂದ ಚಿಣ್ಣರು!
ಕೂಡಿಗೆ : ಸೋಮವಾರ ಆರಂಭವಾದ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವದ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಮಕ್ಕಳು ಎತ್ತಿನ ಗಾಡಿಯಲ್ಲಿ ಆಗಮಿಸುವ ಮೂಲಕ ಗಮನ ಸೆಳೆದರು.
(ಮೊದಲ ಪುಟದಿಂದ) ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಶಿಕ್ಷಕರು ಶಾಲೆಗೆ ಮಕ್ಕಳನ್ನು ಭವ್ಯವಾಗಿ ಸ್ವಾಗತಿಸಿ ಸಿಹಿ ವಿತರಿಸಿದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಯಲ್ಲಿ ತಳಿರು ತೋರಣ ಕಟ್ಟಿ ಸಿಂಗರಿಸಲಾಗಿತ್ತು.
ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, 'ಶಿಕ್ಷಣವೇ ಶಕ್ತಿ' ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿAದ ಶಾಲೆಗೆ ಆಗಮಿಸಿದರು.
ಗ್ರಾಮದ ಮುಖ್ಯರಸ್ತೆ ಬಳಿಯಿಂದ ಆರಂಭಗೊAಡ ಮಕ್ಕಳ ಎತ್ತಿನ ಗಾಡಿಗೆ ಗ್ರಾಮ ಹಿರಿಯರೂ ಆದ ಪ್ರಗತಿಪರ ಕೃಷಿಕ ಕೆ.ಎಸ್. ರಾಜಾಚಾರಿ ಚಾಲನೆ ನೀಡಿದರು.
ಶಾಲಾ ಅಂಗಳಕ್ಕೆ ಎತ್ತಿನ ಗಾಡಿಯ ಮೂಲಕ ಆಗಮಿಸಿದ ಮಕ್ಕಳನ್ನು ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮತ್ತು ಶಿಕ್ಷಕ ವೃಂದ ಹೂ ಹಾಗೂ ಪುಸ್ತಕ ನೀಡುವ ಮೂಲಕ ಸ್ವಾಗತಿಸಿದರು.
ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದ ಎಸ್ಡಿಎಂಸಿ ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಎಸ್ಡಿಎಂಸಿ ಸದಸ್ಯ ಜವರಯ್ಯ, ಹಿರಿಯ ಕೃಷಿಕ ಕೆ.ಎಸ್.ರಾಜಾಚಾರಿ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಎಸ್.ಎಂ. ಗೀತಾ, ಬಿ.ಎಸ್. ಅನ್ಸಿಲಾ ರೇಖಾ ಹಾಗೂ ಪೋಷಕರು ಇದ್ದರು.
ಶನಿವಾರಸಂತೆಯಲ್ಲಿ ಶುಚಿತ್ವ ಕಾರ್ಯ
ಮುಳ್ಳೂರು : ತಾ. ೩೧ ರಿಂದ ಪ್ರಸ್ತುತ ಶೈಕ್ಷಣಿಕ ಸಾಲಿನ ತರಗತಿ ಪ್ರಾರಂಭೋತ್ಸವ ಹಿನ್ನೆಲೆ ಸೋಮವಾರ ಶನಿವಾರಸಂತೆ ವ್ಯಾಪ್ತಿಯ ವಿವಿಧ ಸರಕಾರಿ ಶಾಲೆಗಳಲ್ಲಿ ಡೀಪ್ ಕ್ಲೀನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣ, ಕೊಠಡಿ, ನೀರಿನ ಟ್ಯಾಂಕ್, ಶೌಚಾಲಯಗಳನ್ನು ಸ್ವಚ್ಛ ಗೊಳಿಸಲಾಯಿತು.
ನಿಡ್ತ ಗ್ರಾ.ಪಂ. ವ್ಯಾಪ್ತಿಯ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಶಾಲಾ ಶಿಕ್ಷಕರು, ಸಿಬ್ಬಂದಿ. ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿ, ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿಗಳು ಸೇರಿಕೊಂಡು ಶಾಲಾ ಅವರಣ, ಶಾಲಾ ತರಗತಿಯ ಕೊಠಡಿಗಳು, ಕುಡಿಯುವ ನೀರಿನ ಟ್ಯಾಂಕ್, ಶೌಚಾಲಯವನ್ನು ಸ್ವಚ್ಛಗೊಳಿಸಿರುವುದರ ಜೊತೆಯಲ್ಲಿ ಅಕ್ಷರ ದಾಸೋಹದ ಕೊಠಡಿ, ಅಡುಗೆ ತಯಾರಿಕಾ ಸಾಮಾಗ್ರಿಗಳನ್ನು ಸ್ವಚ್ಛಗೊಳಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಬಿಂದು ಸುರೇಶ್, ಶಾಲಾ ಮುಖ್ಯ ಶಿಕ್ಷಕ ಸಿ.ಎಸ್.ಸತೀಶ್, ಸಹ ಶಿಕ್ಷಕ ಮಂಜುನಾಥ್, ಅಕ್ಷರ ದಾಸೋಹ ಸಿಬ್ಬಂದಿ ಬಿಂದು, ಸ್ವಾತಿ ಪೋಷಕರಾದ ಲಕ್ಷಿö್ಮ ದಿನೇಶ್ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಶನಿವಾರಸAತೆ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಿಡ್ತ, ಮಾಲಂಬಿ, ಗೋಪಾಲಪುರ, ಆಲೂರು ಸಿದ್ದಾಪುರ ಮುಂತಾದ ಸರಕಾರಿ ಪ್ರಾಥಮಿಕ, ಪ್ರೌಢ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ‘ಡೀಪ್ ಕ್ಲೀನ್’ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.
ಸಂಭ್ರಮದ ವಾತಾವರಣ
ವೀರಾಜಪೇಟೆ: ತಾಲೂಕಿನ ಶಾಲೆಗಳಲ್ಲಿ ಸೋಮವಾರ ಸಂಭ್ರಮದ ವಾತಾವರಣ ಕಂಡುಬAತು. ಶಾಲೆಯ ಪ್ರಾರಂಭವಾದ ಹಿನ್ನೆಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ ಹಸಿರು ತೋರಣಗಳಿಂದ ಸಿಂಗರಿಸಿ ಶಿಕ್ಷಕರು ಮಕ್ಕಳನ್ನು ಬರಮಾಡಿಕೊಂಡರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಶೈಲ ಬೀಳಗಿ ಮಾತನಾಡಿ ಸರಕಾರದ ಆದೇಶ ಮೇರೆಗೆ ಇಂದು ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ಹಸಿರು ತೋರಣಗಳಿಂದ ಸಿಂಗರಿಸಿ, ಮಕ್ಕಳಿಗೆ ಪಠ್ಯಪುಸ್ತಕ ಕೊಡುವ ಮೂಲಕ ಸ್ವಾಗತ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ವೀರಾಜಪೇಟೆ ಸಮೀಪದ ಕಂಡAಗಾಲ ಸರಕಾರಿ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನದ ಮೌಲ್ಯಗಳನ್ನು ತಿಳಿಸಿ ಶುಭ ಹಾರೈಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿ ಬಾಡಗದಲ್ಲಿ ನಮ್ಮ ನಡೆ ಗುಣಾತ್ಮಕ ಶೈಕ್ಷಣಿಕ ವರ್ಷದ ಕಡೆ ಎಂಬ ಕಾರ್ಯಕ್ರಮದೊಂದಿಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.