ಮಡಿಕೇರಿ, ಮೇ ೨೯: ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಉಪ ಕೇಂದ್ರದಿAದ ಹೊರಹೋಗುವ ಎಫ್೧ ನಲ್ಲೂರು, ಎಫ್೨ ಬಾಳೆಲೆ, ಎಫ್೨ ರಾಜಾಪುರ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೩೦ ಮತ್ತು ೩೧ ರಂದು ಬೆಳಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬಾಳೆಲೆ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.