ಸಿದ್ದಾಪುರ, ಮೇ ೨೯: ಸಮಾಜದ ಆಗುಹೋಗುಗಳ ಬಗ್ಗೆ ಸದಾ ಕಾರ್ಯ ನಿರತ ರಾಗಿರುವ ಪತ್ರಕರ್ತರು ಕೆಲಸದ ಒತ್ತಡಗಳ ಮಧ್ಯೆ ತಮ್ಮ ಆರೋಗ್ಯ ವನ್ನು ಕಾಪಾಡಿ ಕೊಳ್ಳಲು ಮುಂದಾಗಬೇಕೆAದು ಡಾ. ಕಿರಣ್ ಎಸ್. ರಾಜ್ ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದಿAದ ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸಮಾಜದ ಬಗ್ಗೆ ಇರುವ ಕಾಳಜಿಯಿಂದ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ತಮ್ಮ ಆರೋಗ್ಯ ಹಾಗೂ ಮನೆಯವರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದರ ಜತೆಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದರ ಮೂಲಕ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಿದ್ದಾಪುರ ಹಾಗೂ ವೀರಾಜಪೇಟೆಯ ಶಾಖೆಯಲ್ಲಿ ಹೃದಯ ತಪಾಸಣೆ ಸೇರಿದಂತೆ ಇನ್ನಿತರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಆರೋಗ್ಯ ಹಾಗೂ ಮನೆಯವರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದರ ಜತೆಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದರ ಮೂಲಕ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಿದ್ದಾಪುರ ಹಾಗೂ ವೀರಾಜಪೇಟೆಯ ಶಾಖೆಯಲ್ಲಿ ಹೃದಯ ತಪಾಸಣೆ ಸೇರಿದಂತೆ ಇನ್ನಿತರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.