ಕಣಿವೆ, ಮೇ ೨೯: ಕುಶಾಲನಗರದ ಕಣಿವೆಯ ರಾಮಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ಎರಡನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬೇಸಿಗೆ ಶಿಬಿರಗಳನ್ನು ನಡೆಸಿ ಮಕ್ಕಳ ಪ್ರತಿಭೆಯನ್ನು ಹೊರತರಲು ಅವಕಾಶ ನೀಡುವುದು ಉತ್ತಮ ಕಾರ್ಯ ಎಂದರು.

ಕೂಡಿಗೆ ಗ್ರಾ.ಪಂ ಸದಸ್ಯ ಟಿ. ಪಿ. ಹಮೀದ್ ಮಾತನಾಡಿ, ಮಕ್ಕಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದರು. ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಕಣಿವೆ, ಮೇ ೨೯: ಕುಶಾಲನಗರದ ಕಣಿವೆಯ ರಾಮಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ಎರಡನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬೇಸಿಗೆ ಶಿಬಿರಗಳನ್ನು ನಡೆಸಿ ಮಕ್ಕಳ ಪ್ರತಿಭೆಯನ್ನು ಹೊರತರಲು ಅವಕಾಶ ನೀಡುವುದು ಉತ್ತಮ ಕಾರ್ಯ ಎಂದರು.

ಕೂಡಿಗೆ ಗ್ರಾ.ಪಂ ಸದಸ್ಯ ಟಿ. ಪಿ. ಹಮೀದ್ ಮಾತನಾಡಿ, ಮಕ್ಕಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದರು. ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ ಎಂದರು. ಪತ್ರಕರ್ತ ಭಾರಧ್ವಾಜ್, ಪ್ರಮುಖರಾದ ಸುರೇಶ್, ನಿವೃತ್ತ ದೈಹಿಕ ಶಿಕ್ಷಕ ಗಣೇಶ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.

ಕಾರ್ಯಕ್ರಮಕ್ಕೆ ಕಲರ್ಸ್ ಕನ್ನಡ ರಿಯಾಲಿಟಿ ಶೋನ ನೃತ್ಯ ಸಂಯೋಜಕರು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನ ಸೀಸನ್ ೫ ರ ವಿಜೇತ ರಾಹುಲ್ ರಾವ್, ಸಿಗ್ನೇಚರ್ ಡ್ಯಾನ್ಸ್ ಕಂಪೆನಿಯ ನೃತ್ಯ ಸಂಯೋಜಕ ವಿನೋದ್ ಕರ್ಕೇರ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ನಂತರ ಕಾರ್ಯಕ್ರಮದ ಅತಿಥಿಗಳನ್ನು ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.