ಕೂಡಿಗೆ, ಮೇ ೨೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಅನುಕೂಲವಾಗುವಂತೆ ಮತ್ತು ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ಹಿತದೃಷ್ಟಿಯಿಂದ ವಿವಿಧ ವಿಷಯಗಳ ಬಗ್ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲಾ ಶಿಕ್ಷಕರು, ಗ್ರಾಮೀಣ ಮಕ್ಕಳಿಗೆÀ ತರಬೇತಿ ನೀಡಿದರು.
೯ ದಿನಗಳವರೆಗೆ ನಡೆದ ಶಿಬಿರದಲ್ಲಿ ಚಿತ್ರಕಲೆ, ಹಾಡುಗಾರಿಕೆ, ನೃತ್ಯ, ಸಂಗೀತ, ಸೇರಿದಂತೆ ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಓದುವುದು, ಅಲ್ಲಿನ ಕಂಪ್ಯೂಟರ್ ಬಳಕೆಯ ಮೂಲಕ ವಿವಿಧ ಜ್ಞಾನದ ಅರಿವಿನ ಬಗ್ಗೆ ತಿಳುವಳಿಕೆ ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ನೆರವೇರಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಂಥಾಲಯ ಸಿಬ್ಬಂದಿ ಜಯಪ್ರಭ ಹಾಜರಿದ್ದರು.