ಮಡಿಕೇರಿ, ಮೇ ೨೯: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆಯುವ ಸಂಕಲ್ಪ ೨೦೨೩ ಕಲೋತ್ಸವದ ಲೋಗೊ ಅನಾವರಣ ಕಾರ್ಯಕ್ರಮ ಜರುಗಿತು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊಫೆಸರ್ ರಾಘವ ಬಿ. ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಶೈಲಶ್ರೀ ಕೆ. ಲೋಗೊವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.