ಹತ್ತು ಕೆ.ಜಿ. ಅಕ್ಕಿ ವಿತರಣೆಗೆ ಕ್ರಮ - ಮುನಿಯಪ್ಪ
ಬೆಂಗಳೂರು, ಮೇ ೩೦: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ೧೦ ಕೆ.ಜಿ. ಅಕ್ಕಿ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತು ಕೆ.ಜಿ. ಅಕ್ಕಿ ನೀಡುವ ಸಂಬAಧ ಕೇಂದ್ರ ಸರಕಾರದ ನೆರವನ್ನು ಕೋರಲಾಗುವುದು. ಕೇಂದ್ರ ಸರಕಾರ ಸ್ಪಂದಿಸಿದರೆ ಈಗಾಗಲೇ ನೀಡುತ್ತಿರುವ ೫ ಕೆ.ಜಿ. ಅಕ್ಕಿಯೊಂದಿಗೆ ಹೆಚ್ಚುವರಿ ೫ ಕೆ.ಜಿ. ಸೇರಿಸಿ ೧೦ ಕೆ.ಜಿ. ನೀಡಲಾಗುತ್ತದೆ. ಒಂದುವೇಳೆ ಕೇಂದ್ರ ಸರಕಾರ ಸ್ಪಂದಿಸದಿದ್ದರೆ ಪರ್ಯಾಯ ವ್ಯವಸ್ಥೆ ಮೂಲಕ ಹತ್ತು ಕೆ.ಜಿ. ಅಕ್ಕಿಯನ್ನು ನೀಡುತ್ತೇವೆ. ಯಾವುದೇ ಕಾರಣಕ್ಕೂ ೧೦ ಕೆ.ಜಿ. ಅಕ್ಕಿ ನೀಡಲು ಹಿಂದೇಟು ಹಾಕುವುದಿಲ್ಲ ಎಂದು ಮುನಿಯಪ್ಪ ಹೇಳಿದರು.
ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು, ಮೇ ೩೦: ಯಾವುದೇ ರೀತಿಯ ತನಿಖೆ ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಅಕ್ರಮಗಳ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು ೧೫ ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೊಮ್ಮಾಯಿ, ಬಿಜೆಪಿ ಅವಧಿಯಲ್ಲಿ ಆದ ಹಗರಣ ತನಿಖೆ ವಿಚಾರಕ್ಕೆ ಹೆದರಲ್ಲ. ಯಾವುದೇ ಆರೋಪ ಇರಲಿ, ದೂರು ಇರಲಿ, ಯಾವುದೇ ತನಿಖೆ ಬೇಕಾದರೂ ನಡೆಸಲಿ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಎಂದು ಈ ಹಿಂದೆಯೇ ಹೇಳಿದ್ದೂ, ದೂರನ್ನೂ ನೀಡಿದ್ದೆ. ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆಯಲ್ಲಿ ಆಗಿರಲಿಲ್ಲ. ಇದೀಗ ಹೊಸ ಸರ್ಕಾರ ರಚನೆಯಾಗಿದೆ, ಯಾವುದೇ ರೀತಿ ತನಿಖೆ ನಡೆಸಲಿ, ಎದುರಿಸಲು ನಾವು ಸಿದ್ಧ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು, ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು ಎಂದು ಹೇಳಿದರು.
ಪ್ರಯಾಣಿಕನಿಂದ ಏರ್ ಇಂಡಿಯಾ ಸಿಬ್ಬಂದಿಗೆ ಥಳಿತ
ನವದೆಹಲಿ, ಮೇ ೩೦: ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನಗಳಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವ ಮೂಲಕ ಇತರ ಜನರಿಗೆ ತೊಂದರೆ ನೀಡುವ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಏರ್ ಇಂಡಿಯಾದ ಗೋವಾ-ದೆಹಲಿ ವಿಮಾನದಲ್ಲಿ ಅಂತಹ ಒಂದು ಪ್ರಕರಣ ಕಂಡುಬAದಿದೆ. ನಿನ್ನೆ ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಪುರುಷ ಪ್ರಯಾಣಿಕರೊಬ್ಬರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ. ಏರ್ ಇಂಡಿಯಾ ವಕ್ತಾರರು ಹೇಳುವಂತೆ, ಪ್ರಯಾಣಿಕರೊಬ್ಬರು ಸಿಬ್ಬಂದಿಯನ್ನು ನಿಂದಿಸಿದ್ದು ಅಲ್ಲದೆ ಅವರಲ್ಲಿ ಒಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರವೂ ಸಹ ಪ್ರಯಾಣಿಕ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದ್ದು ಆತನನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಲಾಯಿತು ಎಂದು ತಿಳಿಸಿದರು.
ಮಣಿಪುರ ಹಿಂಸಾಚಾರ ಸಂತ್ರಸ್ತರಿಗೆ ತಲಾ ರೂ. ೧೦ ಲಕ್ಷ ಪರಿಹಾರ
ತೇಜ್‌ಪುರ(ಅಸ್ಸಾಂ), ಮೇ ೩೦: ಹಿಂಸಾಚಾರ ಪೀಡಿತ ಮಣಿಪುರ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು. ಕಳೆದ ೨೬ ದಿನಗಳಿಂದ ಮಣಿಪುರದಲ್ಲಿ ಕೋಮುಗಲಭೆ ನಡೆಯುತ್ತಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಶಾ ಈಶಾನ್ಯ ರಾಜ್ಯದಲ್ಲಿ ೪ ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಇಂಫಾಲ್ ತಲುಪಿದ ಷಾ ಅವರು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಮುಖ್ಯ ಕಾರ್ಯದರ್ಶಿ, ಕ್ಯಾಬಿನೆಟ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಮತ್ತು ೪ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡರು. ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಣಿಪುರ ಸಂಪುಟ ಸಚಿವ ಬಸಂತ್ ಸಿಂಗ್, ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಯಾವುದೇ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು. ರಾಜ್ಯದಲ್ಲಿ ಆಹಾರ ಪದಾರ್ಥಗಳ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಸುಗಮ ಪೂರೈಕೆಯನ್ನು ನಿರ್ವಹಿಸುವುದು ಮತ್ತು ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ೧೦ ಲಕ್ಷ ರೂಪಾಯಿಗಳ ಎಕ್ಸ್ ಗ್ರೇಷಿಯಾ ಮೊತ್ತವನ್ನು ನೀಡಲು ನಿರ್ಧರಿಸಲಾಗಿದೆ ಎಂದರು.
ತAದೆಯ ಸಲಹೆಯಂತೆ ತಂಬಾಕು ಜಾಹೀರಾತಿನಿಂದ ದೂರವಿದ್ದೇನೆ: ಸಚಿನ್ ತೆಂಡೂಲ್ಕರ್
ಮುAಬೈ, ಮೇ ೩೦: ಕ್ರಿಕೆಟ್ ಕ್ಷೇತ್ರದ ಲೆಜೆಂಡ್ ಸಚಿನ್ ತೆಂಡೂಲ್ಕರ್ ತಾವು ಎಂದಿಗೂ ತಂಬಾಕು ಜಾಹೀರಾತಿನಲ್ಲಿ ನಟಿಸದೇ ಇರುವುದಕ್ಕೆ ತಮ್ಮ ತಂದೆಯ ಸಲಹೆಯೇ ಕಾರಣ ಎಂಬ ಮಾಹಿತಿ ಹಂಚಿಕೊAಡಿದ್ದಾರೆ. ತಮಗೆ ತಂಬಾಕು ಉತ್ಪನ್ನಗಳನ್ನು ಉತ್ತೇಜಿಸುವುದಕ್ಕೆ, ಪ್ರೊಮೋಟ್ ಮಾಡುವುದಕ್ಕಾಗಿ ಬಹಳಷ್ಟು ಅವಕಾಶಗಳು ಬಂದಿತ್ತು. ಬಾಯಿಯ ನೈರ್ಮಲ್ಯ ಅಭಿಯಾನದ ಭಾಗವಾಗಿರುವ ಮಹಾರಾಷ್ಟç ಸರ್ಕಾರದ ಸ್ವಚ್ಛ ಮುಖ್ ಅಭಿಯಾನ್‌ಗೆ ನಗುವಿನ ರಾಯಭಾರಿಯಾಗಿ ನೇಮಕಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿನ್ ತೆಂಡೂಲ್ಕರ್, ನಾನು ಭಾರತ ಕ್ರಿಕೆಟ್ ತಂಡಕ್ಕಾಗಿ ಆಡಲು ಆರಂಭಿಸಿದಾಗ, ಆಗಷ್ಟೇ ಶಾಲಾ ವಿದ್ಯಾಭ್ಯಾಸ ಮುಗಿಸಿದ್ದೆ. ಆಗ ನನಗೆ ಜಾಹೀರಾತುಗಳಲ್ಲಿ ನಟಿಸಿ, ಉತ್ಪನ್ನಗಳನ್ನು ಪ್ರೊಮೋಟ್ ಮಾಡಲು ಅನೇಕ ಅವಕಾಶಗಳು ಬಂದಿದ್ದವು. ಆದರೆ ತನ್ನ ತಂದೆ ಎಂದಿಗೂ ತಂಬಾಕು ಉತ್ಪನ್ನಗಳನ್ನು ಉತ್ತೇಜಿಸದಂತೆ ನನಗೆ ಹೇಳಿದ್ದರು. ಅಂತೆಯೇ ನನಗೆ ಬಂದಿದ್ದ ಅನೇಕ ತಂಬಾಕು ಜಾಹಿರಾತು ಆಫರ್‌ಗಳನ್ನು ನಾನು ಒಪ್ಪಿಕೊಳ್ಳಲಿಲ್ಲ ಎಂದು ಹೇಳಿದ್ದಾರೆ.