ಗುಡ್ಡೆಹೊಸೂರು, ಮೇ ೩೦ : ಇಲ್ಲಿನ ಬೊಳ್ಳೂರು ಗ್ರಾಮದ ಶ್ರೀ ಬಸವೇಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನ ಸಮಿತಿ ವತಿಯಿಂದ ಶ್ರೀ ಚೌಡೇಶ್ವರಿ ದೇವಸ್ಥಾನದ ವಾರ್ಷಿಕ ಮಹಾಪೂಜೆಯು ಅದ್ಧೂರಿಯಾಗಿ ನಡೆಯಿತು. ಕಾವೇರಿ ನದಿಯಲ್ಲಿ ಗಂಗೆಪೂಜೆ ನೆರವೇರಿಸಿ, ದೇವಸ್ಥಾನಕ್ಕೆ ವಾದ್ಯಗೋಷ್ಠಿಯೊಂದಿಗೆ ಅರ್ಚಕರಾದ ಎನ್.ಕೆ. ಸತ್ಯ ಅವರು ಕಳಸವನ್ನು ದೇವಸ್ಥಾನಕ್ಕೆ ಕೊಂಡೊಯ್ದು ಮಹಾಪೂಜೆ ನಡೆಸಲಾಯಿತು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಎಂ.ಆರ್. ಸೋಮಯ್ಯ, ಬಿ.ಪಿ. ಗುರುಬಸಪ್ಪ, ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂಧರ್ಭ ಸಾವಿರಾರು ಮಂದಿ ಭಾಗವಹಿಸಿದ್ದರು.