ಕೂಡಿಗೆ, ಮೇ ೩೧ : ಕೂಡಿಗೆ ಗ್ರಾಮ ಪಂಚಾಯಿತಿ ಕಳೆದ ಮೂರು ತಿಂಗಳುಗಳಿAದ ವಿದ್ಯುತ್ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯುತ್ ಇಲಾಖೆ ಗ್ರಾಮ ಪಂಚಾಯಿತಿಗೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ.

ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಕಳೆದ ಎಂಟು ತಿಂಗಳುಗಳಿAದ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗೆ ವಿವಿಧ ಮಾಂಸದ ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಬರುವ ವಾರ್ಷಿಕ ಆದಾಯವೂ ಬಾರದ ಹಿನ್ನೆಲೆಯಲ್ಲಿ ಬೇರೆ ಯಾವುದೇ ಆದಾಯ ಮೂಲಗಳು ಇಲ್ಲದ ಕಾರಣ ವಿದ್ಯುತ್ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ಇದೀಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಕೂಡಿಗೆ ಗ್ರಾ.ಪಂ. ೯ ಲಕ್ಷಕ್ಕೂ ಅಧಿಕ ವಿದ್ಯುತ್ ಶುಲ್ಕ ಪಾವತಿಸಲು ಬಾಕಿ ಇದೆ.

-ಕೆ.ಕೆ. ನಾಗರಾಜಶೆಟ್ಟಿ.