ಮಡಿಕೇರಿ, ಮೇ ೩೧ : ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧೦ ಹೈಸೊಡ್ಲೂರು ಫೀಢರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜೂನ್ ೧ ರಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಹುದಿಕೇರಿ, ಹೈಸೊಡ್ಲೂರು, ಬೆಳ್ಳೂರು, ಕೋಣಂಗೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.