ಶನಿವಾರಸಂತೆ, ಮೇ ೩೧: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ಅವರು ವಿದ್ಯಾರ್ಥಿಗಳಿಗೆ ಸರ್ಕಾರದ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಿ, ಸಿಹಿ ಹಂಚಿ, ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಂಡು ಆರಂಭದಿAದಲೇ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯಶಿಕ್ಷಕ ಅಬ್ದುಲ್ ರಬ್, ಪ್ರಾಂಶುಪಾಲ ಜಗದೀಶ್ ಬಾಬು, ಶಿಕ್ಷಕರು, ಸಿಬ್ಬಂದಿ, ಪ್ರಮುಖ ಕೆ.ಪಿ. ಮಂಜುನಾಥ್ ಇದ್ದರು.