ಸುಂಟಿಕೊಪ್ಪ, ಮೇ ೩೧: ಸಮೀಪದ ೭ನೇ ಹೊಸಕೋಟೆ ಗ್ರಾಮದ ತೊಂಡೂರು ಗ್ರಾಮದ ವಿಕಾಸ್ ಜನಸೇವಾ ಟ್ರಸ್ಟ್ ವೃದ್ಧಾಶ್ರಮದ ವೃದ್ಧರಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಇ.ಎಂ.ಆರ್.ಐ. ಗ್ರೀನ್ ಹೆಲ್ತ್ ಸರ್ವಿಸ್ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವೃದ್ಧಾಶ್ರಮದ ವ್ಯವಸ್ಥಾಪಕ ರಮೇಶ್ ಮಾತನಾಡಿ, ಆಹಾರ ಮತ್ತು ಆರೋಗ್ಯದಂತಹ ಇತರ ಮೂಲಭೂತ ಅವಶ್ಯಕತೆಗಳನ್ನು ಪಡೆಯಲು ಸಾಧ್ಯವಾಗದ ನಿರ್ಗತಿಕ ಹಿರಿಯ ವೃದ್ಧರಿಗೆ ಇ.ಎಂ.ಆರ್.ಐ. ಗ್ರೀನ್ ಹೆಲ್ತ್ ಸರ್ವಿಸ್ ವತಿಯಿಂದ ಉಚಿತ ಸೇವೆ ಮಾಡಿ ಮಾನವೀಯತೆ ಮೆರೆದಿದ್ದಾರೆ, ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದರು. ಈ ಸಂದರ್ಭ ಹೆಲ್ತ್ ಸರ್ವಿಸ್‌ನ ಜಿಲ್ಲಾ ವ್ಯವಸ್ಥಾಪಕ ಎಸ್. ಸೋಮಶೇಖರ್, ಸಿಬ್ಬಂದಿಗಳಾದ ವಿನಯ್, ಅನೀಶ್, ರವಿ, ಯೋಗೀಶ್ ಹಾಜರಿದ್ದರು.