ತಮಿಳುನಾಡಿನ ಸಹೋದರರ ಮೇಲೆ ಕೋಪ-ದ್ವೇಷ ಇಲ್ಲ; ಡಿ.ಕೆ.ಶಿ.

ಬೆಂಗಳೂರು, ಜೂ. ೧: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದಕ್ಕೆ ಪ್ರತಿಕ್ರಿಯಿಸಿ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ ಎಂದು ತಿಳಿಸಿದ್ದಾರೆ. ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರAತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ತಂದೆ

ದಾವಣಗೆರೆ, ಜೂ. ೧: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. ಮೃತ ಮಕ್ಕಳು ನಾಲ್ಕು ವರ್ಷದ ಅದ್ವೆöÊತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಅಮರ ಕಿತ್ತೂರು (೩೫) ಹತ್ಯೆ ಆರೋಪಿ ಆಗಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿ ಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊAದಿಗೆ ವಾಸವಾಗಿದ್ದನು. ತನ್ನ ಪತ್ನಿ ಜಯಲಕ್ಷಿö್ಮ ತವರು ಮನೆ ವಿಜಯಪುರಕ್ಕೆ ತೆರಳಿದ್ದ ವೇಳೆ ತನ್ನ ಮಕ್ಕಳನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್‌ಗೆ ಕಾರಿನಲ್ಲಿ ಕರೆದು ಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ. ಪೊಲೀಸರ ತನಿಖೆಯ ವೇಳೆ ಮಕ್ಕಳನ್ನು ತಾನೇ ಕೊಲೆ ಮಾಡಿದ್ದಾಗಿ ಅಮರ ಒಪ್ಪಿಕೊಂಡಿದ್ದಾನೆ. ಈ ಸಂಬAಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿ ೧೫೦ ವಿದ್ಯಾರ್ಥಿಗಳು ಅಸ್ವಸ್ಥ

ಪಾಟ್ನಾ, ಜೂ. ೧: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು ೧೫೦ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್‌ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸುಮಾರು ೧೦೦ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, ೫೦ ವಿದ್ಯಾರ್ಥಿಗಳನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಗಾಹಾದ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಬಗಾಹಾ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳ ಪೋಷಕರು ಶಾಲಾ ಆಡಳಿತ ಮಂಡಳಿ ಮತ್ತು ಬಿಸಿಯೂಟ ಪೂರೈಸುವ ಎನ್‌ಜಿಒ ವಿರುದ್ಧ ಪ್ರತಿಭಟನೆ ನಡೆಸಿದರು. ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ. ಎನ್‌ಜಿಒ ವಿರುದ್ಧ ಅಪರಾಧ ಸಾಬೀತಾದರೆ ಅದನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ ,ಅಲ್ಲದೇ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಗಾಹ ಎಸ್‌ಡಿಎಂ ಡಾ. ಅನುಪಮಾ ಸಿಂಗ್ ಹೇಳಿದ್ದಾರೆ.

ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯ : ಪ್ರತಿಭಟನೆ

ಇಂದೋರ್, ಜೂ. ೧: ಮಧ್ಯಪ್ರದೇಶದ ದಾಮೋಹ್‌ನಲ್ಲಿರುವ ಖಾಸಗಿ ಶಾಲೆಯೊಂದು ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯಿಸಿದೆ ಎಂದು ಆರೋಪಿಸಲಾಗಿದೆ. ಹಿಂದೂ ಸಂಘಟನೆಗಳ ದೂರಿನ ನಂತರ ಈ ಬಗ್ಗೆ ತನಿಖೆ ಆರಂಭವಾಗಿದೆ. ಈ ಘಟನೆ ಬಯಲಿಗೆ ಬಂದ ನಂತರ ಇಡೀ ನಗರದಲ್ಲಿ ಕೋಲಾಹಲ ಉಂಟಾಗಿದ್ದು ಶಾಲೆಯ ದಾಖಲಾತಿ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದವು. ದಾಮೋಹ್‌ನ ಖಾಸಗಿ ಶಾಲೆಯೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಒಳಗೊಂಡಿರುವ ಉಡುಗೆಯನ್ನು ಧರಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೂರುದಾರರು ಹೇಳಿದ್ದಾರೆ. ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿಯು ಹಿಂದೂ ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಿದ್ದರೆ, ದಮೋಹ್ ಜಿಲ್ಲಾಧಿಕಾರಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಂದ ಪತಿ

ಹೈದರಾಬಾದ್, ಜೂ. ೧: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ ೨೦ರ ರಾತ್ರಿ ಅಪರಾಧ ನಡೆದಿದ್ದರೂ, ಪೊಲೀಸರು ೧೦ ದಿನಗಳ ನಂತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಟಾವತ್ ತರುಣ್ (೨೪) ಎಂಬಾತ ತನ್ನ ಪತ್ನಿ ಝಾನ್ಸಿ (೨೦) ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ತೆಲಂಗಾಣದ ನಗರ್‌ಕರ್ನೂಲ್ ಜಿಲ್ಲೆಯವರಾದ ಇವರಿಬ್ಬರು ೨೦೨೧ರಲ್ಲಿ ಪ್ರೇಮ ವಿವಾಹವಾಗಿದ್ದರು. ಆಟೋ ರಿಕ್ಷಾ ಚಾಲಕನಾಗಿದ್ದ ತರುಣ್ ತನ್ನ ಪತ್ನಿಯೊಂದಿಗೆ ಹೈದರಾಬಾದ್‌ಗೆ ವಲಸೆ ಬಂದಿದ್ದು, ಕುಟುಂಬವು ಐಎಸ್ ಸದನ್ ವಿಭಾಗದ ಖಾಜಾ ಬಾಗ್‌ನಲ್ಲಿ ನೆಲೆಸಿತ್ತು. ದಂಪತಿಗೆ ಎರಡು ವರ್ಷದ ಮಗನಿದ್ದಾನೆ.