ವೀರಾಜಪೇಟೆ, ಜೂ.೧: ಮದ್ಯ ವ್ಯಸನಿಯಾಗಿದ್ದ ಕೂಲಿ ಕಾರ್ಮಿಕನೋರ್ವ ಅನಾರೋಗ್ಯದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಮಿಕ ಕಾಂತರಾಜು ಎಂಬಾತ ತೆಲುಗರ ಬೀದಿಯ ಓಣಿಯೊಂದರಲ್ಲಿ ಅಸ್ವಸ್ಥಗೊಂಡು ನರಳಾಡುತ್ತಿದ್ದ ಸಂದರ್ಭ ಸ್ಥಳೀಯರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ನೆರವಿನಿಂದ ಕಾಂತರಾಜುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ.

ವೀರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತನ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಿಲ್ಲ. ಮೃತನ ವಾರಿಸುದಾರರು ಇದ್ದಲ್ಲಿ ವೀರಾಜಪೇಟೆ ನಗರ ಪೊಲೀಸ್ ಠಾಣೆಗೆ ದೂ: ೦೮೨೭೪-೨೫೭೩೩೦/ ೯೪೮೦೮೦೪೯೫೫ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.