ಮಡಿಕೇರಿ, ಜೂ. ೧ : ಸಣ್ಣ ವಯಸ್ಸಿನಲ್ಲಿಯೇ ಹೆಚ್ಚು ಹೆಚ್ಚು ಜವಾಬ್ದಾರಿಯನ್ನು ನಿಭಾಯಿಸು ವುದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಮುನ್ನುಡಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.

ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಹೊಸದಾಗಿ ಆಯ್ಕೆಗೊಂಡ ಗ್ರಾಮ ಲೆಕ್ಕಾಧಿಕಾರಿಗಳಿಗೆ ಗುರುವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ರೀತಿಯ ಸವಾಲುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎಲ್ಲರೂ ಹೆಚ್ಚು ವಿಚಾರಗಳನ್ನು ತಿಳಿದು ಕೊಳ್ಳುವಂತಾಗಬೇಕು.

ಅಧಿಕಾರಿಗಳು ಯಾವ ರೀತಿಯಾಗಿ ಯಾವ ಸೆಕ್ಷನ್ ಅಡಿಯಲ್ಲಿ ಯಾರು ಜಾಗ ಮಂಜೂರು ಮಾಡಿದ್ದಾರೆ ಹಾಗೂ ಯಾವ ಸೆಕ್ಷನ್ ಅಡಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಲಾಗುವುದು ಹಾಗೂ ಕೆಲವೊಂದು ವಿಚಾರಗಳ ಬಗ್ಗೆ ತಿಳಿಯಲು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಹೇಳಿಕೊಡಲಾಗುವುದು ಎಂದು ಹೇಳಿದರು.

ಸೆಕ್ಷನ್‌ಗೆ ಸಂಬAಧಿಸಿದ ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಪುಸ್ತಕ ಅಧ್ಯಯನ ಮಾಡಬೇಕು. ದಿನ ನಿತ್ಯ ೨ ರಿಂದ ೩ ಗಂಟೆ ಇದಕ್ಕೆ ಸಮಯ ಮೀಸಲಿಡಬೇಕು, ಹಾಗೂ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಸಂದೇಶ ಹಾಗೂ ಯಾವುದಾದರು ವಿಷಯಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ಇದ್ದರೆ ಪರಸ್ಪರ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಮಾತನಾಡಿ ನಿರಂತರವಾಗಿ ಓದುವ ಮೂಲಕ ಜ್ಞಾನ ವೃದ್ದಿಸಿಕೊಳ್ಳಬೇಕು, ಗ್ರಾಮಾಡಳಿತ ಗ್ರಾಮ ಲೆಕ್ಕಾಧಿಕಾರಿಯ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ತರಬೇತಿಯಲ್ಲಿ ತಿಳಿಸಲಾಗುವುದು ಹಾಗೂ ಆಹಾರ, ಚುನಾವಣೆ, ಭೂ ಅಭಿವೃದ್ಧಿ, ಸಾರ್ವಜನಿಕ ಸ್ಥಳಗಳಿಗೆ ಭೂಮಿ ಹಂಚಿಕೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆದ್ದರಿಂದ ಹೆಚ್ಚಿನ ಗಮನ ಕೇಂದ್ರೀಕರಿಸಿ ಮಾಹಿತಿ ತಿಳಿದುಕೊಳ್ಳುವಂತೆ ಹೇಳಿದರು.

ನಿವೃತ್ತ ತಹಶೀಲ್ದಾರ್ ಬಿ.ಎಸ್.ಹಿರಿಯಣ್ಣ ಮಾತನಾಡಿ ಅಭ್ಯರ್ಥಿಗಳಿಗೆ ವಾರದಲ್ಲಿ ಒಂದು ಬಾರಿಯಾದರೂ ತಾಲೂಕು ಕಚೇರಿಗಳಲ್ಲಿ ಪ್ರಾಯೋಗಿಕವಾಗಿ ತರಬೇತಿ ನೀಡಲು ಅನುವು ಮಾಡಿಕೊಡುವಂತೆ ಕೋರಿದರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಶಿವರಾಮಯ್ಯ ಮಾತನಾಡಿದರು.