ವೀರಾಜಪೇಟೆ, ಜೂ. ೧: ಗುಲ್ಬರ್ಗ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾಟದಲ್ಲಿ ಕೊಡಗಿನ ತಂಡ ಉತ್ತಮ ಪ್ರದರ್ಶನ ನೀಡಿ, ಕೊಡಗು ತಂಡದ ಮೂವರು ವಿದ್ಯಾರ್ಥಿಗಳು ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ತಿರೋಡಿರ ನಾಣಯ್ಯ, ಐಚಂಡ ಸಜನ್ ಮಾಚಯ್ಯ ಮತ್ತು ಐಯ್ಯನೆರವಂಡ ನಾಚಪ್ಪ ಅವರುಗಳು ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಅಂತರ್ಜಿಲ್ಲಾ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಮೂವರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಇದೀಗ ಕರ್ನಾಟಕ ರಾಜ್ಯ ತಂಡದಲ್ಲಿ ಸ್ಥಾನವನ್ನು ಪಡೆದಿದ್ದಾರೆ. ತಾ.೭ ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಆರಂಭವಾಗುವ ರಾಷ್ಟçಮಟ್ಟದ ಹಾಕಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.