ಕೂಡಿಗೆ, ಜೂ. ೧: ಕೂಡಿಗೆ ಗ್ರಾಮ ಪಂಚಾಯಿತಿ ವಿದ್ಯುತ್ ಸಂಪರ್ಕ ಕಡಿತ ಎಂಬ ವರದಿಗೆ ಸಂಬAಧಿಸಿದAತೆ ಜಿಲ್ಲಾ ಪಂಚಾಯಿತಿ ಸಿಇಓ ಅವರೊಂದಿಗೆ ಕೂಡಿಗೆ ಗ್ರಾಮ ಪಂಚಾಯಿತಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ. ಎರಡೂ ಇಲಾಖೆಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸುವAತೆ ತಿಳಿಸಲಾಗಿದೆ. ಅಧಿಕಾರಿಗಳಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಂಬAಧಿಸಿದವರು ಕ್ರಮ ವಹಿಸಬೇಕು ಎಂದು ಶಾಸಕ ಮಂಥರ್ ಗೌಡ ತಿಳಿಸಿದ್ದಾರೆ. ಕೂಡಿಗೆಯಲ್ಲಿ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು ವಿದ್ಯುತ್ ಇಲಾಖೆ ಹಂತ ಹಂತವಾಗಿ ಹಣವನ್ನು ಸಂಗ್ರಹಿಸಿಕೊಳ್ಳಬೇಕು. ಸಾರ್ವಜನಿಕರು, ಟೆಂಡರ್‌ದಾರರು ಕೂಡಿಗೆ ಗ್ರಾಮ ಪಂಚಾಯಿತಿಗೆ ಪಾವತಿಸಬೇಕಾದ ತೆರಿಗೆ ಹಾಗೂ ಟೆಂಡರ್ ಹಣವನ್ನು ಸಂದಾಯ ಮಾಡುವ ಮೂಲಕ ಗ್ರಾಮದ ಪ್ರಗತಿಗೆ ಸಹಕರಿಸಿಬೇಕೆಂದು ಹೇಳಿದರು.

ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಅನಂತ್, ಶಿವಕುಮಾರ, ಫಿಲೋಮಿನಾ, ಪ್ರಮುಖರಾದ ಅಣ್ಣಯ್ಯ, ಚಂದ್ರಶೇಖರ್, ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.