ಮಡಿಕೇರಿ, ಜೂ.೧: ಪೊನ್ನಂಪೇಟೆ ಮತ್ತು ವಿರಾಜಪೇಟೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸ ಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. ೩ ರಂದು ಬೆಳಗ್ಗೆ ೯.೩೦ ರಿಂದ ಸಂಜೆ ೪ ಗಂಟೆ ವರೆಗೆ ೬೬/೧೧ ಕೆವಿ ಪೊನ್ನಂಪೇಟೆ, ೬೬/೧೧ ಕೆವಿ ವೀರಾಜಪೇಟೆ, ೩೩/೧೧ ಕೆವಿ ಶ್ರೀಮಂಗಲ, ೩೩/೧೧ಕೆವಿ ಸಿದ್ದಾಪುರ ಹಾಗೂ ೩೩/೧೧ ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟು ಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಅಯ್ಯಂಗೇರಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.