ವೀರಾಜಪೇಟೆ, ಜೂ.೧: ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನಾನಿರತ ಅಂರ‍್ರಾಷ್ಟಿçÃಯ ಒಲಂಪಿಕ್ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಪೊಲೀಸರ ವರ್ತನೆಯನ್ನು ಖಂಡಿಸಿ ಕ್ರೀಡಾಪಟುಗಳಿಗೆ ಬೆಂಬಲ ಸೂಚಿಸಿ ಮಾಜಿ ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಶಾಂತಿಯುತ ಪ್ರತಿಭಟನೆ ನಡೆಸಿ ಶಿರಸ್ಥೆದಾರ್ ಅಣ್ಣು ನಾಯಕ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮಾದಂಡ ತಿಮ್ಮಯ್ಯ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕ್ರೀಡಾಪಟುಗಳನ್ನು ಗೌರವಯುತವಾಗಿ ಕಾಣುತ್ತಿಲ್ಲ. ಅವರುಗಳಿಗೆ ಭದ್ರತೆ ಇಲ್ಲ. ಕೂಡಲೇ ಕ್ರೀಡಾಪಟುಗಳ ಮೇಲೆ ದಾಖಲಾಗಿರುವ ಎಫ್.ಐ.ಆರ್‌ನ್ನು ರದ್ದುಗೊಳಿಸಿ ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ನರೇಂದ್ರ ಕಾಮತ್ ಮಾತನಾಡಿ, ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ಒತ್ತಾಯಿಸಿದರು.

ಪುರಸಭೆ ಸದಸ್ಯ ರಾಜೇಶ್ ಮಾತನಾಡಿ, ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಹಮೀದ್, ಕಾರ್ಯದರ್ಶಿ ಶಶಿಧರನ್, ಸಂಘಟನಾ ಕಾರ್ಯದರ್ಶಿ ಶಾನ್, ಪುರಸಭೆ ಸದಸ್ಯ ಸಿ.ಕೆ. ಪ್ರಥ್ವಿನಾಥ್, ರ‍್ವಿನ್ ರಾಜೇಶ್, ದಿನೇಶ್, ಲೋಹಿತ್ ಮತ್ತಿತರರು ಉಪಸ್ಥಿತರಿದ್ದರು.