ಕೂಡಿಗೆ, ಜೂ. ೨: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ಗೆಲುವಿಗಾಗಿ ಹರಕೆ ಹೊತ್ತಿದ್ದ ಕೂಡಿಗೆಯ ಅಭಿಮಾನಿ ಬಳಗದ ಅರುಣ್ ಮಾದಪ್ಪ ಮತ್ತು ಸಂತೋಷ್ ಕೂಡಿಗೆಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡರು.

ಕೂಡಿಗೆ ಸುಬ್ರಹ್ಮಣ್ಯ ದೇವಾಲಯದಿಂದ ಆರಂಭಗೊAಡ ಈ ಪಾದಯಾತ್ರೆಗೆ ಶಾಸಕ ಮಂಥರ್ ಗೌಡ ಚಾಲನೆ ನೀಡಿದರು.

ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ. ಹಮೀದ್, ಕೂಡಿಗೆ ಗ್ರಾ.ಪಂ. ಸದಸ್ಯರಾದ ಅರುಣ್ ರಾವ್, ಕೆ. ಶಿವಕುಮಾರ್, ಅನಂತ್, ಇಂಟೆಕ್ ಜಿಲ್ಲಾಧ್ಯಕ್ಷ ಬಿ.ಡಿ. ಅಣ್ಣಯ್ಯ, ಮದಲಾಪುರ ಹಾಲು ಉತ್ಪಾದಕರ ಸಂಘದ ಸದಸ್ಯ ಸುನಿಲ್ ರಾವ್, ಕೂಡುಮಂಗಳೂರು ಗ್ರಾ.ಪಂ. ಸದಸ್ಯೆ ಫಿಲೋಮಿನ, ಮಾಜಿ ಸದಸ್ಯ ಎನ್.ಕೆ. ಚಂದ್ರಶೇಖರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.