ಮೂರ್ನಾಡು, ಜೂ. ೨: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಕಾಲೇಜು ವಾಣಿಜ್ಯ ಫೆಸ್ಟ್ನ್ನು ಆಯೋಜಿಸ ಲಾಗಿತ್ತು. ವಾಣಿಜ್ಯ ಫೆಸ್ಟ್ನಲ್ಲಿ ವಿವಿಧ ರೀತಿಯ ಸ್ಪರ್ಧೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲ ಚೌರಿರ ಡಾ. ಜಗತ್ ತಿಮ್ಮಯ್ಯ ಆಗಮಿಸಿ, ಮಾತನಾಡಿ, ಇಂತಹ ಕಾರ್ಯಕ್ರಮ ಪ್ರತಿ ವಿದ್ಯಾರ್ಥಿ ಗಳಲ್ಲೂ ಉತ್ಸಾಹವನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಮಾತನಾಡಿದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ವಿದ್ಯಾರ್ಥಿಗಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರೇಖಾ ಚಿಣ್ಣಪ್ಪ ಮಾತನಾಡಿ, ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದೇ ಇರುತ್ತದೆ ಅದನ್ನು ಹೊರಸೂಸಲು ಇಂತಹ ವೇದಿಕೆಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರು ಪುದಿಯೊಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಹಾಗೂ ಫೆಸ್ಟ್ನ ಮುಖ್ಯ ಸಂಯೋಜಕರಾದ ಉಪನ್ಯಾಸಕ ಸೋಮಯ್ಯ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ವಿವಿಧ ಸ್ಪರ್ಧೆಗಳ ತೀರ್ಪುಗಾರರು, ವಿಶೇಷ ಆಹ್ವಾನಿತರು, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.