ಸುಂಟಿಕೊಪ್ಪ, ಜೂ. ೨: ಹುಲಿ ಚಾಮುಂಡೇಶ್ವರಿ ದೇವಸ್ಥಾನದ ೮ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ೨ ದಿನಗಳ ವಿಶೇಷ ಪೂಜೆ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮಂಗಳವಾರ ರಾತ್ರಿ ೭ ಗಂಟೆಗೆ ನಡೆದ ಶ್ರೀಚಾಮುಂಡಿ ಹೋಮ ಹಾಗೂ ಅಭಿಷೇಕ ಪೂಜೆ, ಅಲಂಕಾರ ಪೂಜೆ ನಡೆಸಿ ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾದಿಗಳಿಗೆ ತೀರ್ಥ ಪ್ರಸಾದ, ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಈ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳನ್ನು ಅಂದಗೋವೆ ಗ್ರಾಮದ ಅರ್ಚಕರುಗಳಾದ ಗಣೇಶ ಭಟ್ ಹಾಗೂ ಮಂಜುನಾಥ್ ಭಟ್ ನೆರವೇರಿಸಿದರು.