ಮಡಿಕೇರಿ, ಜೂ.೨ : ವಿಶ್ವ ಬೈಸಿಕಲ್ ದಿನ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಾ. ೩ ರಂದು (ಇಂದು) ಬೆಳಿಗ್ಗೆ ೮ ಗಂಟೆಗೆ ಸೈಕ್ಲೋಥಾನ್ ಜಾಥಾ ಕಾರ್ಯಕ್ರಮ ನಡೆಯಲಿದೆ.
ಜಾಥಾವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕಾ÷್ವಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಜಿಲ್ಲಾ ಸರ್ವೇಕ್ಷಣಾ ಘಟಕದ ಮುಂಭಾಗದವರೆಗೆ ಸಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.