ಮಡಿಕೇರಿ, ಜೂ. ೨: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಜೂನ್ ೧೫ ಮತ್ತು ೧೬ ರಂದು ಬಡ ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಕೆ.ಎಸ್. ಸದಾನಂದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಮೆಡ್ಟಾçನಿಕ್ಸ್ ಅಮೆರಿಕಾ ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ವಿಸ್ಕಿನ್ ಸನ್ ಅಮೇರಿಕಾದ ಸಹಯೋಗದೊಂದಿಗೆ ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಜೂನ್ ೧೫ ಮತ್ತು ೧೬ರಂದು ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗಾಗಿ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತ ಮಟ್ಟದ ಮೆಡಿಕೇಟಡ್ ಸ್ಪಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಆಂಜಿಯೋಗ್ರಾA ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದು. ಅವಶ್ಯಕತೆ ಇರುವ ರೋಗಿಗಳು ದಾಖಲಾತಿ ವೇಳೆ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಜೂನ್ ೮ರೊಳಗೆ ಬೆಳಿಗ್ಗೆ ೧೦ ಗಂಟೆಯಿAದ ೪ ಗಂಟೆಯವರೆಗೆ ನೋಂದಾಯಿಸಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಮೈಸೂರು ಜಯದೇವ ಆಸ್ಪತ್ರೆ ೮೬೬೦೧೦೫೪೯೨ ಅಥವಾ ೦೮೨೧-೨೩೩೬೨೫೫/೨೩೩೬೧೪೪ ಅನ್ನು ಸಂಪರ್ಕಿಸಬಹುದೆAದು ಅವರು ತಿಳಿಸಿದ್ದಾರೆ.