ಕೂಡಿಗೆ, ಜೂ. ೨: ಜಿಲ್ಲಾಡಳಿತ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂದರ್ಭ ಶಾಲೆಯ ಇಕೋ ಕ್ಲಬ್ ಹಾಗೂ ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ "ನಮಗೆ ಆಹಾರ ಬೇಕು, ತಂಬಾಕು ಅಲ್ಲ" ಎಂಬ ಘೋಷವಾಕ್ಯದೊಂದಿಗೆ 'ವಿಶ್ವ ತಂಬಾಕು ರಹಿತ ದಿನ'ದ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಭಿತ್ತಿಫಲಕಗಳನ್ನು ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ವಿದ್ಯಾರ್ಥಿಗಳು ತಂಬಾಕಿನ ಯಾವುದೇ ಉತ್ಪನ್ನಗಳನ್ನು ಬಳಸದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ನAತರ ತಂಬಾಕು ರಹಿತ ದಿನದ ಮಹತ್ವ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಡಿಡಿಪಿಐ, ಸಿ. ರಂಗಧಾಮಯ್ಯ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ "ನಮಗೆ ಆಹಾರ ಬೇಕು, ತಂಬಾಕು ಅಲ್ಲ" ಎಂಬ ಘೋಷವಾಕ್ಯದೊಂದಿಗೆ ತಂಬಾಕು ತ್ಯಜಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ.ಪ್ರಕಾಶ್, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಕೂಡು ಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಎಸ್ಡಿಎಂಸಿ. ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ, ಆರ್.ಎಂ.ಎಸ್.ಎ. ಡಿವೈಪಿಸಿ ಸೌಮ್ಯ, ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ, ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ.ಪಿ. ರೇವಣ್ಣ, ಸಮಿತಿ ಸದಸ್ಯರು ಮತ್ತು ವಿಧ್ಯಾರ್ಥಿಗಳು ಹಾಜರಿದ್ದರು.