ಮಡಿಕೇರಿ, ಜೂ.೨: ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಕುಮಾರ ರಂಗಪ್ರಯೋಗ ಶಾಲೆಯ ೨೦೨೩-೨೪ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿದ್ದು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.
ಒಳ್ಳೆಯ ಗ್ರಂಥಭAಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.
ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ ೫೭೭೫೧೫, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್‌ಸೈಟ್ ತಿತಿತಿ. ಣheಚಿಣಡಿesಛಿhooಟsಚಿಟಿehಚಿಟಟi.oಡಿg ನಲ್ಲಿ ಪ್ರವೇಶ ಅರ್ಜಿ ಡೌನ್‌ಲೋಡ್ ಮಾಡಿ ಜೂನ್, ೩೦ ರೊಳಗೆ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೯೪೪೮೩೯೮೧೪೪, ೮೮೬೧೦೪೩೫೫೩ ಮತ್ತು ೯೪೮೨೯೪೨೩೯೪ ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಕಟಣೆ ತಿಳಿಸಿದೆ.