ಮಡಿಕೇರಿ, ಜೂ. ೨: ಮಡಿಕೇರಿ ನಗರಸಭಾ ವ್ಯಾಪ್ತಿಯ ರಾಜಾಸೀಟ್ ಬಳಿಯಿಂದ ಮುನೇಶ್ವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ವೀರನಾಡು ರಕ್ಷಣಾ ವೇದಿಕೆ ವತಿಯಿಂದ ನಗರ ಸಭಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ಅಧ್ಯಕ್ಷ ಹರೀಶ್ ಆಚಾರ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೂಡಲೇ ರಸ್ತೆ ದುರಸ್ತಿಪಡಿಸುವಂತೆ ಆಗ್ರಹಿಸಲಾಯಿತು. ಅಲ್ಲದೆ ನಗರ ವ್ಯಾಪ್ತಿಯಲ್ಲಿ ಹಲವಷ್ಟು ಕಾಮಗಾರಿಗಳು ನೆನೆಗುದಿಗೆ ಬಿದ್ದಿದ್ದು, ಎಲ್ಲವನ್ನು ಮಳೆಗಾಲ ಆರಂಭಕ್ಕೂ ಮುನ್ನ ಪೂರ್ಣಗೊಳಿಸುವಂತೆ ಒತ್ತಾಯಿಸಿ ನಗರಸಭೆಗೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.