ಚೆಯ್ಯAಡಾಣೆ: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಕಲಶದೊಂದಿಗೆ ಸ್ವಾಗತಿಸಿ ಶಾಲೆಯ ಮುಖ್ಯ ದ್ವಾರದಿಂದ ಬರ ಮಾಡಿಕೊಳ್ಳಲಾಯಿತು.
ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಗಿರೀಶ್ ಪೂಣಚ್ಚ, ಉಪಾಧ್ಯಕ್ಷರು ಪೆಮ್ಮಯ್ಯ, ಕಾರ್ಯದರ್ಶಿ ರಾಜೇಶ್ ಅಚ್ಚಯ್ಯ, ಕೋಶಾಧಿಕಾರಿ ಐತಿಚಂಡ ಪ್ರಕಾಶ್, ಮುಖ್ಯ ಶಿಕ್ಷಕಿ ಸುನೀತಾ ಹಾಗೂ ನಿರ್ದೇಶಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಹೂಗುಚ್ಛ ಹಾಗೂ ನೋಟ್ ಪುಸ್ತಕ ನೀಡಲಾಯಿತು.ಕೂಡಿಗೆ: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ದಾಖಲಾತಿ ಆಂದೋಲನ ಮತ್ತು ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಮತ್ತು ಗುಲಾಬಿ ಹೂ ನೀಡಿ ಬರಮಾಡಿಕೊಳ್ಳಲಾಯಿತು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತçಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ, ಎಸ್ಡಿಎಂಸಿ ಅಧ್ಯಕ್ಷ ಹರೀಶ್, ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ, ಸಹ ಶಿಕ್ಷಕರಾದ ಶಿವಲಿಂಗು, ರಾಗಿಣಿ, ಮೇರಿ, ವಿಜಯ ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.ಬಾಳೆಲೆ: ಬಾಳೆಲೆ ವಿಜಯಲಕ್ಷಿö್ಮ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮತ್ತು ಅಧ್ಯಾಪಕರು ಸಿಹಿ ನೀಡಿ ಶಾಲೆಗೆ ಬರಮಾಡಿಕೊಂಡರು.
ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಅಧ್ಯಾಪಕ ಬೆನಡಿಕ್ಟ್ ಫರ್ನಾಂಡೀಸ್, ರಾಘವೇಂದ್ರ, ಪ್ರಭುಕುಮಾರ್, ಜಯಪ್ಪ, ಸುಬ್ಬಯ್ಯ ಮತ್ತು ಪೋಷಕರು ಇದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಕೆ.ಪಿ.ಎಸ್. ಪ್ರೌಢಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ, ಹೂವು ನೀಡಿ, ಸಿಹಿ ವಿತರಿಸಿ ಬರಮಾಡಿಕೊಳ್ಳುವ ಮೂಲಕ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.
ಈ ಸಂದರ್ಭ ಎಸ್ಡಿಎಂಸಿ ಸದಸ್ಯರಾದ ರಾಮಕೃಷ್ಣ, ಗುಲ್ತಾಜ್, ಉಪ ಪ್ರಾಂಶುಪಾಲ ಎಂ.ಯು. ಚಂಗಪ್ಪ, ಶಿಕ್ಷಕರಾದ ಅನ್ರಿತ ಪೊಟ್ರಾಡೋ, ಡ್ಯಾನಿ, ಈರಪ್ಪ, ಅನಿತಾ, ಮಂಜುನಾಥ್, ರಮೇಶ್, ಚಂದನ, ವಸಂತಿ, ಚಿದಾನಂದಪ್ಪ, ನಳಿನಿ, ಬೋಜಮ್ಮ, ದೇವಮ್ಮ, ನವ್ಯ, ಭಾಗ್ಯ ಇದ್ದರು.