ಕೂಡಿಗೆ, ಜೂ. ೪: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ. ಗ್ರಂಥಾಲಯದ ಮೇಲ್ವಿಚಾರಕರ ಸಹಕಾರದೊಂದಿಗೆ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಮತ್ತು ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ಹಿತದೃಷ್ಟಿ ಯಿಂದ ವಿವಿಧ ವಿಷಯಗಳ ಬಗ್ಗೆ ಗ್ರಾ.ಪಂ. ವ್ಯಾಪ್ತಿಯ ಶಾಲಾ ಶಿಕ್ಷಕರು ಮತ್ತು ನಿವೃತ್ತ ಪ್ರಾಧ್ಯಾ ಪಕರು ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ಜ್ಞಾನದ ಬೆಳವಣಿಗೆಗೆ ಪೂರಕ ವಾದ ವಿಷಯಗಳ ಬಗ್ಗೆ ತರಬೇತಿ ನೀಡಿದರು. ೯ ದಿನಗಳವರೆಗೆ ನಡೆದ ಶಿಬಿರದಲ್ಲಿ ಚಿತ್ರಕಲೆ, ಹಾಡುಗಾರಿಕೆ, ನೃತ್ಯ, ಸಂಗೀತ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಕಲಿಸಿ ಕೊಡಲಾಯಿತು. ಗ್ರಂಥಾಲಯ ದಲ್ಲಿ ಪುಸ್ತಕಗಳನ್ನು ಓದುವುದು, ಅಲ್ಲಿನ ಕಂಪ್ಯೂಟರ್ ಬಳಕೆಗೆ ಮೂಲಕ ವಿವಿಧ ಜ್ಞಾನದ ಅರಿವಿನ ಬಗ್ಗೆ ತಿಳುವಳಿಕೆ ನೀಡ ಲಾಯಿತು. ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರವನ್ನು ವಿತರಣೆ ಮಾಡ ಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಮಂಗಳಾ ಪ್ರಕಾಶ್ ನೆರವೇರಿಸಿದರು. ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ಅಂಜನಾದೇವಿ, ಗ್ರಂಥಾಲಯದ ಮೇಲ್ವಿಚಾರಕಿ ಮಹಾದೇವಿ ಹಾಜರಿದ್ದರು.