ಬಹನಾಗ, ಜೂ. ೩ : ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ೩೦೦ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಹಲವಾರು ಪ್ರಯಾಣಿಕರು ಇನ್ನೂ ರೈಲುಗಳಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದ್ದು, ಗಾಯಾಳುಗಳ ಸಂಖ್ಯೆಯೂ ಮತ್ತಷ್ಟು ಹೆಚ್ಚಾಗಬಹುದು. ಶಾಲಿಮಾರ್-ಚೆನ್ನೆöÊ ಕೋರಮಂಡಲ್ ಎಕ್ಸ್ಪ್ರೆಸ್ ಭುವನೇಶ್ವರದಿಂದ ಸುಮಾರು ೧೮೦ ಕಿಮೀ ದೂರದಲ್ಲಿರುವ ಬಹನಾಗ ನಿಲ್ದಾಣದಿಂದ ಸುಮಾರು ೧೦೦ ಮೀಟರ್ ದೂರದಲ್ಲಿ ಲೂಪ್ ಲೈನ್ ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರೈಲಿನ ಕನಿಷ್ಟ ೧೨ ಬೋಗಿಗಳು ಪಲ್ಟಿಯಾಗಿ ಪಕ್ಕದ ಹಳಿ ಮೇಲೆ ಬಿದ್ದಿವೆ. ಇದೇ ವೇಳೆ ಪಕ್ಕದ ಟ್ರ‍್ಯಾಕ್ ನಲ್ಲಿ ಬರುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್ಪ್ರೆಸ್ ರೈಲು ಚದುರಿದ ಕೋರಮಂಡಲ್ ಎಕ್ಸ್ಪ್ರೆಸ್ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

(ಮೊದಲ ಪುಟದಿಂದ) ಅಪಘಾತ ಸಂಭವಿಸಿದ ಕೋರಮಂಡಲ್ ಎಕ್ಸ್ಪ್ರೆಸ್ ಗಂಟೆಗೆ ೧೨೮ ಕಿಮೀ ವೇಗದಲ್ಲಿ ಚಲಿಸುತ್ತಿದ್ದರೆ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್ಪ್ರೆಸ್ ಗಂಟೆಗೆ ೧೧೬ ಕಿಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ರೈಲ್ವೆ ಮಂಡಳಿಗೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಖರಗ್‌ಪುರ ರೈಲ್ವೆ ವಿಭಾಗದ ಅಧಿಕಾರಿಗಳ ಆರಂಭಿಕ ಜಂಟಿ ತಪಾಸಣಾ ವರದಿಯ ಪ್ರಕಾರ, ಟ್ರ‍್ಯಾಕ್ ಜಾಯಿಂಟ್‌ಗಳನ್ನು ತಪ್ಪಾಗಿ ಇರಿಸಲಾಗಿದೆ ಮತ್ತು ಸ್ಟೇಷನ್ ಮಾಸ್ಟರ್ ಕೊಠಡಿಯಲ್ಲಿ ಸರಿಯಾದ ಸಿಗ್ನಲ್ ನೀಡಲು ವಿಫಲವಾಗಿದ್ದಾರೆ.

ಪ್ರಧಾನಿ ಭೇಟಿ : ಭೀಕರ ರೈಲು ಅಪಘಾತದ ಸ್ಥಳಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪ್ರಧಾನಿ ಮೋದಿ ಅವರು ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಾಲಸೋರ್ ಆಗಮಿಸಿ, ಅಲ್ಲಿಂದ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಡೆದ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು.

ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಈ ಸಂದರ್ಭ ಹಾಜರಿದ್ದು ಘಟನಾ ಸ್ಥಳದಲ್ಲಿ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿಯಿAದ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಂಡರು.

ನAತರ ಪ್ರಧಾನಿ ಮೋದಿ ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದಕ್ಕೂ ಮುನ್ನ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದರು.