ಮಡಿಕೇರಿ, ಜೂ. ೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ ೫ ರಂದು ಬೆಳಗ್ಗೆ ೧೦ ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ನೂತನ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಟಿ ಪುಟ್ಟರಂಗಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ. ಸಿಇಓ ಡಾ.ಎಸ್.ಆಕಾಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಕೆ.ಬಿ.ಪ್ರಸಾದ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ನಗರಸಭೆ ಆಯುಕ್ತರಾದ ವಿಜಯ, ಮಡಿಕೇರಿ ವಕೀಲ ಸಂಘದ ಅಧ್ಯರಾದ ಕೆ.ಡಿ.ದಯಾನಂದ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ, ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರಾದ ಟಿ.ಜಿ.ಪ್ರೇಮಕುಮಾರ್, ಪರಿಸರ ಅಧಿಕಾರಿ ಕೆ.ಕೀರ್ತಿ ಕುಮಾರ್, ಉಪ ಪರಿಸರ ಅಧಿಕಾರಿ ಪ್ರದೀಪ್ ಇತರರು ಪಾಲ್ಗೊಳ್ಳಲಿದ್ದಾರೆ.