ಮಡಿಕೇರಿ, ಜೂ. ೪: ಕೊಡಗಿ ನಲ್ಲಿರುವ ಜ್ವಲಂತ ಸಮಸ್ಯೆಗಳು ಪರಿಹಾರವಾಗಬೇಕಾದರೆ ಕೊಡಗಿಗೆ ಸಚಿವ ಸ್ಥಾನ ಅತ್ಯ ಗತ್ಯ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ ಅಬಿ üಪ್ರಾಯ ಪಟ್ಟಿದ್ದಾರೆ.
ಪತ್ರಿಕಾ ಭವನ ದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ ದರು. ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯ ಮಂತ್ರಿಯವರ ಕಾನೂನು ಸಲಹೆಗಾ ರರಾಗಿ ಸಂಪುಟ ದರ್ಜೆಯ ಸ್ಥಾನ ಮಾನ ಒದಗಿಸಿರುವುದು ಸಂತಸ ತಂದಿದೆಯಾದರೂ ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಅವುಗಳನ್ನು ಪರಿಹರಿಸುವ ನಿಟ್ಟಿ ನಲ್ಲಿ ಕೊಡಗಿಗೆ ಸಚಿವ ಸ್ಥಾನದ ಅನಿ ವಾರ್ಯತೆ ಇದೆ. ಪೊನ್ನಣ್ಣ ಅವರು ಮೊದಲ ಬಾರಿಗೆ ಗೆದ್ದವರಾದರೂ ಈ ಹಿಂದೆ ಸರ್ಕಾ ರದ ಅಡ್ವೋಕೇಟ್ ಜನರಲ್ ಆಗಿ ಕರ್ತವ್ಯ ನಿರ್ವಹಿಸಿದ ಅನುಭವ ಅವರಿಗೆ ಇದೆ. ಅದರ ಆಧಾರದಲ್ಲಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗುವಂತಾ ಗಬೇಕು. ಈಗಾಗಲೇ ಪಕ್ಷದಿಂದ ಹಾಗೂ ಜಿಲ್ಲೆಯ ಸಂಘ ಸಂಸ್ಥೆ ಗಳಿಂದ ಕೊಡಗಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ವರಿಷ್ಠರಿಗೆ, ಮುಖ್ಯ ಮಂತ್ರಿಗಳಿಗೆ ಮನವಿ ಮಾಡಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರುಗಳು ಭರವಸೆ ನೀಡಿದ್ದರು. ಇದೀಗ ಕೊಡಗು ಬಿಜೆಪಿ ಮುಕ್ತವಾಗಿ ಇಬ್ಬರೂ ಕಾಂಗ್ರೆಸ್ ಅಭ್ಯ ರ್ಥಿಗಳು ಗೆದ್ದಿದ್ದಾರೆ. ಈ ಹಿನ್ನೆಲೆ ಯಲ್ಲಿ ಪಕ್ಷದ ವರಿಷ್ಠರು, ಪಕ್ಷದ ಕಾರ್ಯಕರ್ತರು ಹಾಗೂ ಮತದಾ ರರಿಗೆ ನಿರಾಸೆ ಉಂಟುಮಾಡದೆ ಕೊಡ ಗಿಗೆ ಸಚಿವ ಸ್ಥಾನ ನೀಡಬೇಕೆಂದು ಸಂಕೇತ್ ಪೂವಯ್ಯ ಕೋರಿದರು.
ಕಾಂಗ್ರೆಸ್ ಸರ್ಕಾರ ಈ ಹಿಂದಿ ನಿಂದಲೂ ಕೊಡಗಿಗೆ ಸಚಿವ ಸ್ಥಾನ ನೀಡುತ್ತಾ ಬಂದಿದ್ದು, ಈ ಬಾರಿಯೂ ಸಿಗುವಂತಾಗಬೇಕು. ವಿಧಾನಸಭಾ ಚುನಾವಣೆ ಫಲಿತಾಂಶ ಮುಂಬರುವ ಲೋಕಸಭಾ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಗಳ ದಿಕ್ಸೂಚಿ ಎಂದು ಹೇಳಿದ ಸಂಕೇತ್ ಬಿಜೆಪಿಯ ದುರಾಡಳಿತದಿಂದ ಬೇಸತ್ತಿ ರುವ ಮತದಾರರು ಮುಂದಿನ ಚುನಾ ವಣೆಗಳಲ್ಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.