ಮಡಿಕೇರಿ, ಜೂ. ೪: ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆ ಯಲ್ಲಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆಯಿತು.
ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವ ಜನಿಕರು ಭೇಟಿ ನೀಡು ವಂತಾಗಲು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ “ಬಾರ್‌ಕೋಡ್ ಸ್ಕಾö್ಯನರ್” ಫಲಕ ವನ್ನು ರಾಜಾಸೀಟು, ರಾಜರ ಗದ್ದುಗೆ, ನಗರದ ಕೋಟೆ, ಓಂಕಾರೇಶ್ವರ ದೇವಾಲಯ, ನಿಸರ್ಗಧಾಮ, ದುಬಾರೆ ಮತ್ತಿತರ ಪ್ರಮುಖ ಸ್ಥಳಗಳಲ್ಲಿ ಅಳವಡಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರಿಗೆ ಸೂಚಿಸಿದರು.
“ಬಾರ್‌ಕೋಡ್ ಸ್ಕಾö್ಯನರ್” ಫಲಕ ಅಳವಡಿಸುವುದಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಭರಿಸಲಾಗುವುದು. ಈ ಸಂಬAಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರ್‌ಗೆ ತಿಳಿಸಿದರು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ವಾರದ ಎಲ್ಲಾ ದಿನಗಳಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ತೆರೆಯುವಂತಾಗಬೇಕು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು.
ಸ್ಮಾರಕ ಭವನದ ಆವರಣ ಮತ್ತಷ್ಟು ಆಕರ್ಷಣಿಯಗೊಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಹೂವಿನ ಗಿಡಗಳನ್ನು ನೆಡುವಂತಾಗಬೇಕು. ಆ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಅಗತ್ಯ ಸಹಕಾರ ನೀಡುವಂತೆ ಹಾಗೂ ಸ್ಮಾರಕ ಭವನಕ್ಕೆ ಕೂಡಲೇ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ನಗರಸಭೆಯ ಪೌರಾ ಯುಕ್ತರಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಅವರು ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ ಕಾಮಗಾರಿ ಯನ್ನು ತ್ವರಿತವಾಗಿ ಪೂರ್ಣಗೊಳಿಸು ವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗೆ ಸೂಚಿಸಿದರು.
ಕುಶಾಲನಗರ ಕಲಾಭವನ ಕಾಮಗಾರಿ ಸಂಬAಧ ಖುದ್ದಾಗಿ ಸ್ಥಳ ಪರಿಶೀಲನೆ ಮಾಡೋಣ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸಭೆಯಲ್ಲಿ ಪೌರಾಯುಕ್ತರಾದ ವಿಜಯ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಸೈನಿಕ ಕಲ್ಯಾಣ ಇಲಾ ಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಮೋದ್, ನಿರ್ಮಿತಿ ಕೇಂದ್ರದ ಎಂಜಿ ನಿಯರ್ ರಾಘವೇಂದ್ರ, ವ್ಯವಸ್ಥಾಪಕ ರಾದ ಕರಿಯಪ್ಪ ಇತರರು ಇದ್ದರು.