ಕೂಡಿಗೆ, ಜೂ. ೫: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಕಾರದಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಕರ್ನಾಟಕ ಕಾವಲುಪಡೆ ಜಿಲ್ಲಾ ಅಧ್ಯಕ್ಷ ಎಂ. ಕೃಷ್ಣ ಮಾತನಾಡಿ ದಾನಿಗಳು ಹೆಚ್ಚು ಹೆಚ್ಚು ಸರ್ಕಾರಿ ಶಾಲೆ ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮುಖಾಂತರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭ ದಾನಿಗಳಾದ ಸೈಜನ್ ಪೀಟರ್ ಅವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಭಾಗ್ಯ, ಸಹ ಶಿಕ್ಷಕರಾದ ಶಿವಲಿಂಗು, ರಾಗಿಣಿ, ಮೇರಿ, ವಿಜಯ, ವಾಣಿ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ್, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಗರ್ ಹಾಜರಿದ್ದರು.